ನೂತನ ಪಿಂಚಣಿ ಯೋಜನೆ ರದ್ದು ಕೋರಿ ಮನವಿ

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರಲ್ಲಿ 2006 ನಂತರದಲ್ಲಿ ನೇಮಕ ಗೊಂಡವರಿಗೆ ಅಳವಡಿಸಿರುವ ಅವೈಜ್ಞಾನಿಕ ನೂತನ ಪಿಂಚಣಿ ಯೋಜನೆ (NPS) ರದ್ದುಗೊಳಿಸಲು, ರಾಜ್ಯದ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲು ಕೋರಿ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಪರವಾಗಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ, ಹರೀಶ್ ‌ಕುಮಾರ್ ಅವರು, ಈ ಯೋಜನೆ ಸಂಪೂರ್ಣ ಅವೈಜ್ಞಾನಿಕ ವಾಗಿದ್ದು, ಈಗಾಗಲೇ ಈ ಬಗ್ಗೆ ಶಾಸನ ಸಭೆಯಲ್ಲಿ ಧ್ವನಿ ಎತ್ತಿದ್ದೇನೆ. ಮುಂದೆಯೂ ಮುಖ್ಯಮಂತ್ರಿಗಳಿಗೆ ಯೋಜನೆ ರದ್ದತಿಗೆ ಒತ್ತಾಯಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ತಾಲೂಕು ಘಟಕದ ಅಧ್ಯಕ್ಷ ಸುರೇಶ್ ಮಾಚಾರ್, ಪ್ರಧಾನ ಕಾರ್ಯದರ್ಶಿ ಸೀತಾರಾಮ, ಸಂಘಟನಾ ಕಾರ್ಯದರ್ಶಿ ಪರಮೇಶ್, ಪದಾಧಿಕಾರಿಗಳಾದ ವಿಶ್ವ, ಚೌಡಯ್ಯ, ವಿಧಾನ ಪರಿಷತ್ ಸದಸ್ಯರ ಆಪ್ತ ಸಹಾಯಕ ಪುಟ್ಟಸ್ವಾಮಿ ಉಪಸ್ಥಿತರಿದ್ದರು.

error: Content is protected !!