ಐಎನ್‌ಒ ಕರ್ನಾಟಕ ರಾಜ್ಯ ಘಟಕ ಪ್ರ. ಕಾರ್ಯದರ್ಶಿಯಾಗಿ ಡಾ.ಐ. ಶಶಿಕಾಂತ್ ಜೈನ್


ಧರ್ಮಸ್ಥಳ: ಅಂತಾರಾಷ್ಟ್ರೀಯ ನ್ಯಾಚುರೋಪತಿ ಸಂಸ್ಥೆ ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಶಾಂತಿವನ ಟ್ರಸ್ಟ್‌ನ ಯೋಗ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ಆಯ್ಕೆಯಾಗಿದ್ದಾರೆ.
ಡಾ. ಐ. ಶಶಿಕಾಂತ್ ಜೈನ್ ಅವರು ಕಳೆದ 19 ವರ್ಷಗಳಿಂದ ಧರ್ಮಸ್ಥಳ ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶಾಂತಿವನ ಟ್ರಸ್ಟ್‌ನ ಮೂಲಕ ವಿದ್ಯಾರ್ಥಿಗಳಿಗಾಗಿ ಹೊರತರುತ್ತಿರುವ ಮೌಲ್ಯಾಧಾರಿತ ಶಿಕ್ಷಣದ ಪುಸ್ತಕಗಳನ್ನು ಶಾಂತಿವನ ಟ್ರಸ್ಟಿಗಳ ಹಾಗೂ ಹೆಗ್ಗಡೆಯವರ ಕುಟುಂಬಸ್ಥರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ತಲುಪಿಸುವ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಜತೆಗೆ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಪ್ರಕೃತಿ ಚಿಕಿತ್ಸಾ ಸಾಧಕರಿಗೆ ಹಾಗೂ ಸಾರ್ವಜನಿಕರಿಗೆ ಯೋಗದ ಮಾರ್ಗದರ್ಶನ ನೀಡುತ್ತಿದ್ದಾರೆ.
ಶಾಂತಿವನ ಟ್ರಸ್ಟಿನಿಂದ ಏಕಕಾಲದಲ್ಲಿ ಯೋಗ ಪ್ರಾತ್ಯಾಕ್ಷಿಕೆ ನಡೆಸಿ ಗಿನ್ನಿಸ್ ದಾಖಲೆಯ ಸಂದರ್ಭದಲ್ಲೂ ಜವಾಬ್ದಾರಿ ವಹಿಸಿದ್ದರು. ಇವರ ಎಲ್ಲಾ ಸೇವೆಗಳನ್ನು ಗುರುತಿಸಿ ಐಎನ್‌ಓ ಅಂತರಾಷ್ಟ್ರೀಯ ಅಧ್ಯಕ್ಷ ಡಾ.ಅಮ್ರಿತ್ ಮೂನತ್ ಹಾಗೂ ರಾಷ್ಟ್ರೀಯ ಅಧ್ಯಕ್ಷ ಡಾ.ಅನಂತ್ ಬಿರಾದರ್ ಅವರು ಅಕ್ಟೋಬರ್ 28ರಂದು ಆದೇಶ ಹೊರಡಿಸಿದ್ದು, ಅಂತಾರಾಷ್ಟ್ರೀಯ ನ್ಯಾಚುರೋಪತಿ ಸಂಸ್ಥೆಯು ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಿದ್ದಾರೆ

error: Content is protected !!