ಬಿ.ಜೆ.ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿಗಳಿಂದ ಶ್ರಮಿಕ ಭೇಟಿ

ಬೆಳ್ತಂಗಡಿ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎನ್. ರವಿಕುಮಾರ್, ಉಪಾಧ್ಯಕ್ಷ ರಾಜೇಶ್ ಮೈಸೂರು, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ,
ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಅವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಶ್ರಮಿಕ ಕಚೇರಿಗೆ ಭೇಟಿ ನೀಡಿದರು.


ಕಚೇರಿಗೆ ಆಗಮಿಸಿದ ಗಣ್ಯರನ್ನು ಶಾಸಕ ಹರೀಶ್ ಪೂಂಜ ಸ್ವಾಗತಿಸಿ, ಗೌರವಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎನ್. ರವಿಕುಮಾರ್, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಉಪಾಧ್ಯಕ್ಷ ರಾಜೇಶ್ ಮೈಸೂರು ಅವರು ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಗುರುವಾರ ಭಾಗವಹಿಸಿ, ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಸಂದರ್ಭ, ಬೆಳ್ತಂಗಡಿ ಶಾಸಕರ ಕಚೇರಿಗೆ ಭೇಟಿ ನೀಡಿದರು.

ಬಿ.ಎನ್. ರವಿಕುಮಾರ್ ಮಾತನಾಡಿ, ಉಪಚುನಾವಣೆ ನಡೆದ ರಾಜರಾಜೇಶ್ವರಿ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಚನ್ನಕೇಶವ, ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಸೀತಾರಾಮ ಬಿ.ಎಸ್., ಕೊರಗಪ್ಪ ಗೌಡ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಯತೀಶ್ ಶೆಟ್ಟಿ, ತಾ.ಪಂ. ಸದಸ್ಯ ಜೋಯೆಲ್ ಮೆಂಡೋನ್ಸಾ, ಪ್ರಮುಖರಾದ ನರಸಿಂಹ ಶೆಟ್ಟಿ, ನಂದಕುಮಾರ್, ರಾಮಪ್ರಸಾದ್ ಮರೋಡಿ, ರಾಜೇಶ್ ಪೆಂರ್ಬುಡ ಹಾಗೂ ಜಯಾನಂದ ಕಲ್ಲಾಪು ಉಪಸ್ಥಿತರಿದ್ದರು.

error: Content is protected !!