ಪ್ರಧಾನಿ ಮೋದಿಯಿಂದ ಕನ್ನಡದಲ್ಲಿ ಟ್ವೀಟ್: ಶಿರಾ, ರಾಜರಾಜೇಶ್ವರಿ ನಗರ ಗೆಲುವಿಗೆ ಅಭಿನಂದನೆ

ಬೆಳ್ತಂಗಡಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಟ್ವೀಟ್  ಮಾಡಿ, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಕನ್ನಡ ಭಾಷಾಭಿಮಾನ ಮೆರೆದಿದ್ದಾರೆ.
ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ರಾಜ್ಯ ಸರ್ಕಾರವನ್ನು ಮತ್ತಷ್ಟು ಬಲಪಡಿಸಿವೆ. ಈ ಹಿನ್ನೆಲೆ ಮೋದಿ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.


ಯಡಿಯೂರಪ್ಪ ಸರ್ಕಾರವನ್ನು ಮೋದಿ ಅಭಿನಂದಿಸಿದ್ದಾರೆ. ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟ್ಟರ್​ ಅಕೌಂಟ್ ನಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
‘ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃ ದೃಢೀಕರಿಸುತ್ತದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ‘ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು’ ಎಂದಿದ್ದಾರೆ.
ಇನ್ನು ದೇಶದ ಕೆಲವೆಡೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದು, ಈ ಕಾರಣದಿಂದಲೇ ಮೋದಿ ಅವರು ಆಯಾ ರಾಜ್ಯದ‌ ಭಾಷೆಗಳಲ್ಲಿಯೇ ಅಲ್ಲಿನ ಕಾರ್ಯಕರ್ತರಿಗೆ ಹಾಗೂ ಬಿಜೆಪಿ ಮುಖಂಡರಿಗೆ ಶುಭ ಹಾರೈಸಿದ್ದಾರೆ.

error: Content is protected !!