ಶಿರ್ಲಾಲು: ನಮ್ಮ ಗ್ರಾಮ ನಮ್ಮ ಯೋಜನೆ, ಶುಭೋದಯ ಸಂಜೀವಿನಿ ಒಕ್ಕೂಟದ ವಿಶೇಷ ಸಭೆ

ಶಿರ್ಲಾಲು: ಶಿರ್ಲಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಮ್ಮ ಗ್ರಾಮ ನಮ್ಮ ಯೋಜನೆಯ ಹಾಗೂ ಶುಭೋದಯ ಸಂಜೀವಿನಿ ಒಕ್ಕೂಟದ ವಿಶೇಷ ಸಭೆ ಜರುಗಿತು.

ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಮಹಾವೀರ ಅರಿಗ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ತಾ. ಪಂ. ಸದಸ್ಯೆ ಜಯಶೀಲಾ ಗೌಡ, ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ಉಷಾ ಕಾಮತ್, ತಾಲೂಕು. ಸಂಯೋಜಕ ಜಯನಂದ, ಶಿರ್ಲಾಲು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ರಾಜು, ಮಹಿಳಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಗುಣಮ್ಮ ಪಿ. ಜೈನ್, ಶಿರ್ಲಾಲು ಮತ್ತು ಕರಂಬಾರು ಶಾಲಾ ಮುಖ್ಯ ಶಿಕ್ಷಕರು, ಗ್ರಾಮ ಪಂಚಾಯತ್ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಎನ್.ಬಿ.ಕೆ., ಎಲ್.ಸಿ.ಆರ್.ಪಿ.ಗಳು, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು. ಗ್ರಾ.ಪಂ. ಸಿಬ್ಬಂದಿ ಸುಪ್ರಿತಾ ಎಸ್. ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

error: Content is protected !!