67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ: ಹೊಸಂಗಡಿ, ಪೆರಿಂಜೆ ಸಂತೃಪ್ತಿ ಸಭಾಭವನದಲ್ಲಿ ಆಯೋಜನೆ

ಹೊಸಂಗಡಿ: ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಮತ್ತು ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೊಸಂಗಡಿ ಗ್ರಾಮದ ಪೆರಿಂಜೆ ಸಂತೃಪ್ತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿದರು.

ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಲ, ಮಂಗಳೂರು ದ.ಕ. ಜಿಲ್ಲಾ ಸಹಕಾರಿ ಯೂನಿಯನ್, ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್, ದ.ಕ. ಜಿಲ್ಲೆ ಸಹಕಾರ ಇಲಾಖೆ, ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ತಾಲೂಕಿನ ಹಾಲು ಉತ್ಪಾದಕ ಸಹಕಾರ ಸಂಘಗಳು, ತಾಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬಿ. ನಿರಂಜನ್ ಧ್ವಜಾರೋಹಣ ನೆರವೇರಿಸಿದರು. ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಮಂಗಳೂರು ದ.ಕ.ಜಿಲ್ಲಾ ಕೇಂದ್ರ ಸಹಕಾರ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ, ಪೆರಿಂಜೆ ಪಡ್ಯಾರಬೆಟ್ಟು ಅನುವಂಶೀಯ ಆಡಳಿತರಾರರಾದ ಎ.ಜೀವಂಧರ ಕುಮಾರ್, ಮಂಗಳೂರು ದ.ಕ. ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟದ ನಿರ್ದೇಶಕ ಪದ್ಮನಾಭ ಅರ್ಕಜೆ, ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ತಾ.ಪಂ.ಸದಸ್ಯರಾದ  ಓಬಯ್ಯ, ರೂಪಲತಾ, ದ.ಕ.ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಪುತ್ತೂರು ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ ರಾಜು, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಸುಕನ್ಯ ರಾವ್, ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಪ್ರಾ.ಕೃ.ಪ.ಸಹಕಾರ ನೌಕರರಯೂನಿಯನ್ ಅಧ್ಯಕ್ಷ ಯು.ಶೇಖ್ ಲತೀಫ್ ಮೊದಲಾದ ಗಣ್ಯರು ಹಾಗೂ ವಿವಿಧ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ನ ಸ್ವಾಗತಿಸಿದರು. ಅಜಿತ್ ಕೊಕ್ರಾಡಿ ನಿರೂಪಿಸಿದರು.

error: Content is protected !!