ಆಯ್ಕೆಯಾಗಿದ್ದ ಪ.ಪಂ. ಅಧ್ಯಕ್ಷರು, ಉಪಾಧ್ಯಕ್ಷರಿಗೆ ಶಾಕ್:‌ ತಿಂಗಳೊಳಗೆ ಹೊಸ ಮೀಸಲಾತಿ ಘೋಷಣೆ: ಸರಕಾರಕ್ಕೆ ಹೈ ಕೋರ್ಟ್ ಸೂಚನೆ

ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸರ್ಕಾರದಿಂದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ, ಅಧಿಸೂಚನೆ ಹೊರಡಿಸಿತ್ತು. ಅಧಿಸೂಚನೆಯನ್ನು ರದ್ದು ಪಡಿಸಿ, ಹೈಕೋರ್ಟ್ ಆದೇಶಿಸಿದೆ.
ಇಂದು ರಾಜ್ಯ ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳಾದಂತಹಾ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಿಗೆ ಮೀಸಲಾತಿ ನಿಗದಿ ಪಡಿಸಿ, ಅಧಿಸೂಚನೆ ಹೊರಡಿಸಿದ್ದರ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಯೊಂದರ ವಿಚಾರಣೆಯನ್ನು ಹೈಕೋರ್ಟ್ ನ ಏಕ ಸದಸ್ಯಪೀಠವು ನಡೆಸಿದೆ. ಇಂತಹ ಅರ್ಜಿಯ ವಿಚಾರಣೆ ನಡೆಸಿದ, ಹೈಕೋರ್ಟ್ ನ ಏಕಸದಸ್ಯ ಪೀಠವು, ರಾಜ್ಯ ಸರ್ಕಾರ ಹೊರಡಿಸಿದ್ದಂತ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿಯ ಅಧಿಸೂಚನೆಯನ್ನೇ ರದ್ದು ಪಡಿಸಿ ಆದೇಶಿದೆ.
ಇನ್ನು ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿಯನ್ನು ರದ್ದು ಪಡಿಸಿರುವಂತ ಹೈಕೋರ್ಟ್ ಏಕಸದಸ್ಯ ಪೀಠವು, ಮತ್ತೆ ಹೊಸದಾಗಿ ನಾಲ್ಕು ವಾರಗಳಲ್ಲಿಯೇ ನೂತನ ಮೀಸಲಾತಿ ಪಟ್ಟಿಯನ್ನು ಪ್ರಕಟಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಅನೇಕ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರಾಗಿ ರಾಜ್ಯ ಸರ್ಕಾರದ ಮೀಸಲಾತಿಯಂತೆ ಆಯ್ಕೆಗೊಂಡಿದ್ದವರಿಗೆ ಬಿಗ್ ಶಾಕ್ ಅನ್ನು ಹೈಕೋರ್ಟ್ ನೀಡಿದೆ.

error: Content is protected !!