ಗುಜರಾತ್ ಏಕತಾ ಪ್ರತಿಮೆ ಬಳಿ ಕನ್ನಡ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ಬರೋಡ ತುಳು ಸಂಘದ ಅಧ್ಯಕ್ಷರು, ಹಾಗೂ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಗುಜರಾತ್ ನ ಸರ್ದಾರ್ ವಲ್ಲಭಭಾಯ್ ಪಟೇಲ್ ಏಕತಾ ಪ್ರತಿಮೆಯ ಬಳಿ ರಾಜ್ಯದ ಪ್ರವಾಸಿಗರಿಗೆ ಅನುಕೂಲವಾಗುವಂತೆ ಕರ್ನಾಟಕ ಭವನ ನಿರ್ಮಿಸುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಗಣೇಶ್ ಗೌಡ ಪುದುವೆಟ್ಟು ಜೊತೆಗಿದ್ದರು.

error: Content is protected !!