ಬೆಳ್ತಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ: ಅಂಬೇಡ್ಕರ್ ಭವನದಲ್ಲಿ ಆಯೋಜನೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಹಾಗೂ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆ ಇದರ ಆಶ್ರಯದಲ್ಲಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.


ಕೋವಿಡ್ 19 ಹಿನ್ನಲೆಯಲ್ಲಿ‌ ಪಟ್ಟಣ ಪಂಚಾಯಿತಿ ಮತ್ತು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಸಾರ್ವಜನಿಕ ರಿಗೆ ಜಾಗೃತಿ ಮೂಡಿಸುವ ಜತೆಗೆ ಆರೋಗ್ಯ ವನ್ನು ಕಾಪಾಡಿಕೊಳ್ಳುವಂತೆ ಈ ಶಿಬಿರವನ್ನು ಆಯೋಜಿಸಲಾಗಿದೆ.


ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಮಧುಮೇಹ, ರಕ್ತದೊತ್ತಡ, ಶೀತ, ಕೆಮ್ಮು, ಜ್ವರ ಇತರ ಕಾಯಿಲೆಗೆ ಸಂಬಂಧಪಟ್ಟ ತಪಾಸಣೆ, ಕೋವಿಡ್ 19 ಉಚಿತ ತಪಾಸಣೆಗಳನ್ನು ನಡೆಸಲಾಯಿತು.
ಸಾರ್ವಜನಿಕರು, ವಿದ್ಯಾರ್ಥಿಗಳು, ಖಾಸಗಿ, ಸರಕಾರಿ ನೌಕರರು ಶಿಬಿರ ಪ್ರಯೋಜನ‌ ಪಡೆದುಕೊಂಡರು.


ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಮುಖ್ಯಾಧಿಕಾರಿ ಎಂ.ಎಚ್. ಸುಧಾಕರ್, ಎಂಜಿನಿಯರ್ ಮಹಾವೀರ ಅರಿಗ, ಆರೋಗ್ಯ ‌ನಿರೀಕ್ಷಕ ಗಿರೀಶ್, ತಾಲೂಕು ಆಸ್ಪತ್ರೆ ವೈದ್ಯರಾದ ಡಾ. ಅಭಿರಾಮ್, ಲ್ಯಾಬ್ ತಂತ್ರಜ್ಞ ಮಾಲ್ತೇಶ್, ಶುಶ್ರೂಷಕಿ ಪೊನ್ನಮ್ಮ, ಕಮಲಾ, ಪ.ಪಂ. ಸಿಬಂದಿ ಕರುಣಾಕರ್ ಪಂಚಾಯಿತಿ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳ್ತಂಗಡಿ ಪ.ಪಂ. ಸಮುದಾಯ ಸಂಘಟನಾಧಿಕಾರಿ ವೆಂಕಟರಮಣ ಶರ್ಮ ಸ್ವಾಗತಿಸಿ, ವಂದಿಸಿದರು.

error: Content is protected !!