ಬೆಳ್ತಂಗಡಿ: ಭಾಷಾ ಸೌಹಾರ್ದತಾ ದಿನ, ದುರ್ಬಲ ವರ್ಗಗಳ ದಿನಾಚರಣೆ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ, ಕಂದಾಯ ಇಲಾಖೆ ಮತ್ತು ತಾಲೂಕು ಪಂಚಾಯಿತಿ ಬೆಳ್ತಂಗಡಿ ಇದರ ಸಂಯುಕ್ತಾಶ್ರಯದಲ್ಲಿ ಭಾಷಾ ಸೌಹಾರ್ದತಾ ದಿನ ಮತ್ತು ದುರ್ಬಲ ವರ್ಗಗಳ ದಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗೇಶ್ ಮೂರ್ತಿ ಬಿ.ಕೆ. ಪ್ರಮಾಣ ವಚನ ಬೋಧಿಸಿದರು.


ಸರಕಾರದ ವಿವಿಧ ಇಲಾಖೆಗಳಿಂದ ಮಾಹಿತಿ ನೀಡಲಾಯಿತು.  ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸತೀಶ್ ಕೆ.ಬಿ., ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ., ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಜಿ., ವಕೀಲರ ಸಂಘದ ಅಧ್ಯಕ್ಷ ಎಲೋಶಿಯಸ್ ಲೋಬೋ, ಸಹಾಯಕ ಸರಕಾರಿ ಅಭಿಯೋಜಕ ಕಿರಣ್ ಕುಮಾರ್, ಪ.ಪಂ. ಮುಖ್ಯಾಧಿಕಾರಿ ಸುಧಾಕರ್, ಸಹಾಯಕ ಸರಕಾರಿ ಅಭಿಯೋಜಕ ದಿವ್ಯರಾಜ್ ಉಪಸ್ಥಿತರಿದ್ದರು.

error: Content is protected !!