ಕಳೆಂಜ ನಂದಗೋಕುಲ ಗೋಶಾಲೆ ಉದ್ಘಾಟನೆ: ಗೋಪೂಜೆ ನೆರವೇರಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಬೆಳ್ತಂಗಡಿ: ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ನಂದಗೋಕುಲ ಗೋಶಾಲೆಯನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿ, ಗೋಪೂಜೆ ನೆರವೇರಿಸಿದರು.
ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ್, ನಿವೃತ್ತ ವೃತ್ತನಿರೀಕ್ಷಕ ಸುದರ್ಶನ್, ಎಸ್.ಕೆ.ಡಿ.ಆರ್.ಡಿ.ಪಿ. ಸಮುದಾಯ ಅಭಿವೃದ್ಧಿ ವಿಭಾಗ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ. ಎಂ.ಎಂ. ದಯಾಕರ್, ಭಾಸ್ಕರ್ ಧರ್ಮಸ್ಥಳ ಕೊಕ್ಕಡ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು. ವಿಶ್ವ ಹಿಂದು ಪರಿಷತ್ ಸಹ ಕಾರ್ಯದರ್ಶಿ ನವಿನ್ ನೆರಿಯಾ ಕಾರ್ಯಕ್ರಮ ನಿರ್ವಹಿಸಿದರು.

error: Content is protected !!