ನಿಡಿಗಲ್ ಸೇತುವೆ ಲೋಕಾರ್ಪಣೆಗೊಳಿಸಿದ ಸಂಸದ ನಳಿನ್ ಕುಮಾರ್

ಉಜಿರೆ: ಬೆಳ್ತಂಗಡಿ- ಚಾರ್ಮಾಡಿ ರಸ್ತೆ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ನಿಡಿಗಲ್ ಸೇತುವೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ನಿರ್ಮಾಣಗೊಂಡಿದೆ.

ಕಡಿಮೆ ಅವಧಿಯಲ್ಲಿ ಪೂರ್ಣಗೊಂಡಿದ್ದರೂ ಗುಣಮಟ್ಟದ ಕಾಮಗಾರಿ ನಡೆದಿದೆ. ಶಾಸಕರ ಮುತುವರ್ಜಿಯಲ್ಲಿ ಅತಿಶೀರ್ಘವಾಗಿ ಕಾಮಗಾರಿ ನಡೆದಿದ್ದು, ಶಾಸಕರಿಗೂ ಅಭಿನಂದನೆಗಳು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.


ಅವರು ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣವಾದ ನಿಡಿಗಲ್ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.


ಈ ಸಂದರ್ಭ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ್, ಪ.ಪಂ. ಉಪಾಧ್ಯಕ್ಷ ಜಯಾನಂದ ಗೌಡ , ಶಶಿಧರ ಕಲ್ಮಂಜ, ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು, ನಾಗರೀಕರು ಉಪಸ್ಥಿತರಿದ್ದರು.

error: Content is protected !!