ಧರ್ಮಸ್ಥಳ: ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 73ನೇ ಹುಟುಹಬ್ಬಕ್ಕೆ ಶಾಸಕ ಹರೀಶ್ ಪೂಂಜ ಅವರು ಹೆಗ್ಗಡೆಯವರ ನಿವಾಸ ಬೀಡಿನಲ್ಲಿ ಶುಭಕೋರಿದರು. ಬುಧವಾರ ಬೆಳಗ್ಗೆ ಶಾಸಕರು ಶುಭಾಶಯ ಕೋರಿ, ಗೌರವಾರ್ಪಣೆ ಸಲ್ಲಿಸಿದರು.
ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಹೆಗ್ಗಡೆಯವರ ಕುಟುಂಬಸ್ಥರು ಉಪಸ್ಥಿತರಿದ್ದರು.
ಡಾ.ಹೆಗ್ಗಡೆಯವರ ಹುಟ್ಟು ಹಬ್ಬದ ಸಂದರ್ಭ ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆಯವರ ಕಲ್ಪನೆಯಂತೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜನ ಜಾಗೃತಿ ವೇದಿಕೆ ಮೂಲಕ ಸಮಾಜದಲ್ಲಿರುವ ಬಡವರಿಗೆ, ನೊಂದವರಿಗೆ, ವಿಶೇಷ ಚೇತನರಿಗೆ ನೆರವು ನೀಡುವ ಕಾರ್ಯಕ್ರಮ ವಾತ್ಸಲ್ಯ ಯೋಜನೆಯ ಸರಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹೆಗ್ಗಡೆಯವರ 73ನೇ ಹುಟ್ಟುಹಬ್ಬ ಆಚರಿಸುವ ಸಂದರ್ಭ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಸೇರಿಸಿಕೊಳ್ಳಿ ಮಾಜಿ ಶಾಸಕ ಪ್ರಭಾಕರ ಬಂಗೇರ, ದ.ಕ. ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ.ಸಾಮ್ರಾಜ್ಯ, ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ ಬೈಂದೂರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಯನಿರ್ವಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಸಿರಿ ಗ್ರಾಮೋದ್ಯೋಗ ಸಂಸ್ಥೆ ಎಂ.ಡಿ. ಕೆ.ಎನ್.ಜನಾರ್ಧನ್, ಉಜಿರೆ ರುಡ್ ಸೆಟ್ ಕಾರ್ಯನಿರ್ವಹಣಾಧಿಕಾರಿ ಎಂ. ಜನಾರ್ದನ್ , ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ವಿ. ರಾಮಸ್ವಾಮಿ, ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ, ಗ್ರಾಮಾಭಿವೃದ್ದಿ ಯೋಜನೆ ಪ್ರಾದೇಶಿಕ ನಿರ್ದೇಶಕರುಗಳು, ಯೋಜನಾಧಿಕಾರಿಗಳು, ಸಿಬ್ಬಂದಿಗಳು, ದೇವಳದ ಸಿಬ್ಬಂದಿಗಳು, ನಾಡಿನ ಗಣ್ಯರು, ಅಭಿಮಾನಿಗಳು, ಊರವರು ಶುಭ ಹಾರೈಸಿದರು.