ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಸಾಧಕರಿಗೆ ಗೌರವಾರ್ಪಣೆ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ನ.28 ರಂದು ಬೆಳ್ತಂಗಡಿ ಸಾಂತೋಮ್ ಟವರ್ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞ, ಅಧ್ಯಕ್ಷತೆ ವಹಿಸಲಿದ್ದು, ಉಜಿರೆ ಎಸ್‌ಡಿಎಂ ಪದವಿ ಕಾಲೇಜು ಪ್ರಾಂಶುಪಾಲ ಡಾ. ಸತೀಶ್ಚಂದ್ರ ಎಸ್., ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿರಲಿದ್ದಾರೆ.
ರಾಷ್ಟ್ರ ಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯಾಕೂಬ್ ಕೊಯ್ಯೂರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ, ವಿಶೇಷ ಪ್ರಬಂಧಕ್ಕಾಗಿ ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿರುವ ಉಪನ್ಯಾಸಕ ಭಾಸ್ಕರ ಹೆಗಡೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈದ್ಯರಾದ ಡಾ. ವೇಣುಗೋಪಾಲ ಶರ್ಮಾ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಜಿನ್ನಪ್ಪ ಗೌಡ ಬೆಳಾಲು, ತುಳುನಾಡ ಕಂಬಳ ಓಟಗಾರನಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುರೇಶ್ ಹಕ್ಕೇರಿ, ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಧಮೋತ್ಥಾನ ಟ್ರಸ್ಟ್ (ರಿ) ಧರ್ಮಸ್ಥಳ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಸ್ತೂರ್ಬ ಸಂಜೀವಿನಿ ಸ್ವ ಸಹಾಯ ಸಂಘ ಬೆಳಾಲು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀರಕೇಸರಿ ಕನ್ಯಾಡಿ ಧರ್ಮಸ್ಥಳ ಇವರಿಗೆ ಗೌರವಾರ್ಪಣೆ ನಡೆಯಲಿದೆ ಎಂದು ಬೆಳ್ತಂಗಡಿ ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ್ ಬಳಂಜ ತಿಳಿಸಿದ್ದಾರೆ.

error: Content is protected !!