ಪಟ್ಟಾಭಿಷೇಕ ರಜತಮಹೋತ್ಸವ ಸಂಭ್ರಮಾಚರಣೆ: ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಗೆ ಗೌರವಾರ್ಪಣೆ

ಅಳದಂಗಡಿ: ಪಟ್ಟಾಭಿಷೇಕ ರಜತ ಮಹೋತ್ಸವದ ಸಂಭ್ರಮದಲ್ಲಿರುವ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಗೆ ಗಣ್ಯರು ಗೌರವಾರ್ಪಣೆ ಸಲ್ಲಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭ ಸಂದೇಶದೊಂದಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರು ಡಾ.ಪದ್ಮಪ್ರಸಾದ ಅಜಿಲರಿಗೆ ಗೌರವಾರ್ಪಣೆ ಸಲ್ಲಿಸಿದರು.
‘ಅರುವ ಅರಮನೆ’ ಹನ್ನೆರಡು ಮಾಗಣೆ ಅರಸು ನಾಮಾವಳಿ ಅಳದಂಗಡಿ ಸಂಸ್ಥಾನದಿಂದ ಅರಸು ಪಟ್ಟಿ ಸ್ವೀಕರಿಸಿದ ಮಹನೀಯರ ವಿವರ ಹೊಂದಿರುವ ಪುಸ್ತಕ ಬಿಡುಗಡೆ ಮಾಡಲಾಯಿತು.

ಸುಮಂಗಲಿಯರಿಂದ ಪಟ್ಟಾಭಿಷೇಕ ರಜತ ಸಂಭ್ರಮವನ್ನು ಆಚರಿಸುತ್ತಿರುವ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಗೆ ಆರತಿ ಬೆಳಗಿದರು. ಪಟ್ಟಾಭಿಷೇಕದ ಪ್ರಯುಕ್ತ ಯುವ ಭಾಗವತಗಾನ ಸುರಭಿ ರವಿಚಂದ್ರ ಕನ್ನಡಿಕಟ್ಟೆ ಅವರ ಸಂಯೋಜನೆಯಲ್ಲಿ ಯಕ್ಷ ಗಾನ ವೈಭವ ಪ್ರದರ್ಶನಗೊಂಡಿತು.

ಇವರ ಜತೆಯಲ್ಲಿ ಭಾಗವತಿಕೆಯಲ್ಲಿ ಗಿರೀಶ್ ರೈ ಕಕ್ಕೆಪದವು, ಕಾವ್ಯಶ್ರೀ ಅಜೇರು, ಮದ್ದಲೆಯಲ್ಲಿ ಚೈತನ್ಯ ಪದ್ಯಾಣ, ಚೆಂಡೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಚಕ್ರತಾಳದಲ್ಲಿ ಕೃಷ್ಣ ಶೆಟ್ಟಿ ಬೆಳ್ತಂಗಡಿ ಸಹಕರಿಸಿದರು.

ಶಾಸಕ ಹರೀಶ್ ಪೂಂಜ, ಮಾಜಿ ಎಂಎಲ್ಸಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಕೆ.‌ಪ್ರಭಾಕರ ಬಂಗೇರ, ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಮೋಹನ್ ಆಳ್ವ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ. ಮಿಥುನ್‌ ರೈ, ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಜಿಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ.ಶೆಟ್ಟಿ, ತಾಪಂ ಸದಸ್ಯ ಸುಧೀರ್ ಸುವರ್ಣ, ಉದ್ಯಮಿಗಳಾದ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಪದ್ಮಶೇಖರ್ ಜೈನ್, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಅಭಿನಂದನ್ ಹರೀಶ್, ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ್ ಜೈನ್, ಅಳದಂಗಡಿ ಚರ್ಚ್ ಧರ್ಮಗುರು ಅನಿಲ್ ಲೋಬೋ, ಧರ್ಮಾಧಿಕಾರಿ ಡಾ. ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಮೊದಲಾದ ಗಣ್ಯರುಗಳು, ಪಟ್ಟಾಭಿಷೇಕ ರಜತ ಸಂಭ್ರಮಾಚರಣೆ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸಾರ್ವಜನಿಕರು ಗೌರವ ಸಲ್ಲಿಸಿದರು.

error: Content is protected !!