ಬೆಳ್ತಂಗಡಿಯಲ್ಲಿ ರಸ್ತೆ ತಡೆ‌ನಡೆಸಿ ಪ್ರತಿಭಟನೆ: ರಸ್ತೆ ಸಂಚಾರದಲ್ಲಿ ವ್ಯತ್ಯಯ : ಕಾಂಗ್ರೆಸ್, ರೈತ ಸಂಘ, ಕಾರ್ಮಿಕ‌ ಸಂಘಟನೆಗಳು ಭಾಗಿ

ಬೆಳ್ತಂಗಡಿ: ದೆಹಲಿಯಲ್ಲಿ ದೇಶದ ರೈತರು ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಹಾಗೂ ಕೇಂದ್ರ ಸರಕಾರದ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.


ಮೂರು ಮಾರ್ಗ ಬಳಿ ರಾಷ್ಟ್ರೀಯ ಕಾಂಗ್ರೆಸ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘ, ದ.ಕ. ಜಿಲ್ಲಾ ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ(ಹಸಿರು ಸೇನೆ) ಜಂಟಿಯಾಗಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.


ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣ ಬಳಿಯಿಂದ ಹೊರಟ ಪ್ರತಿಭಟನಾಕಾರರು, ಘೋಷಣೆಗಳನ್ನು ಕೂಗುತ್ತಾ ಮೂರು ಮಾರ್ಗದ ಬಳಿ ಜಮಾಯಿಸಿ, ರಸ್ತೆಗೆ ಅಡ್ಡಲಾಗಿ ಕೂತು ಪ್ರತಿಭಟನೆ ನಡೆಸಿದರು.

ಈ ಸಂದರ್ಭ ರೈತ ವಿರೋಧಿ ಕಾನೂನು ತಿದ್ದುಪಡಿಗಳನ್ನು ಹಿಂಪಡೆಯಲು ಒತ್ತಾಯಿಸಿ ಹಾಗೂ ಬಡ ಮಹಿಳೆಯರ ಸಾಲ ಮನ್ನಕ್ಕೆ ಒತ್ತಾಯಿಸಲಾಯಿತು. ಪ್ರತಿಭಟನೆ ಸಂದರ್ಭ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.


ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ, ಸಿಪಿಐಎಂ ನಾಯಕ ಬಿ.ಎಂ ಭಟ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಜಿ.ಪಂ ಸದಸ್ಯರಾದ ಧರಣೇಂದ್ರ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್‌ ಕುಮಾರ್, ವಿನ್ಸೆಂಟ್ ಮಾಲಾಡಿ, ಪ್ರವೀಣ್ ಕುಮಾರ್, ಅಬ್ದುಲ್ ರಹಿಮಾನ್ ಪಡ್ಪು, ಕಾಂಗ್ರೆಸ್ ಮುಖಂಡರು, ರೈತ ಸಂಘದ ಪ್ರಮುಖರು ಭಾಗವಹಿಸಿದ್ದರು.

error: Content is protected !!