ಧರ್ಮಸ್ಥಳಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಖಾಸಗಿ ಭೇಟಿ

ಧರ್ಮಸ್ಥಳ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸಕುಟುಂಬಿಕರಾಗಿ ಗುರುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಾ.ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.

ಕೊರೊನಾ ಹತೋಟಿಯಲ್ಲಿದೆ: ಕೊರೊನಾ ಈಗ ಹತೋಟಿಯಲ್ಲಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಒಂದು ವರ್ಷದೊಳಗೆ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಡಾ. ಸುಧಾಕರ್ ಅವರ ಸೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಬೆಂಗಳೂರಿಗೆ ಪ್ರಯಾಣ ಮುಂದುವರಿಸಿದರು.
ಸಚಿವರ ಪತ್ನಿ ಡಾ. ಪ್ರೀತಿ, ಹಾಗೂ ಮಕ್ಕಳು ಸಮನ್ಯು, ಪ್ರದ್ಯುನ್ ಮತ್ತು ಸಾನ್ವಿ ಇದ್ದರು.

error: Content is protected !!