ಧರ್ಮಸ್ಥಳಕ್ಕೆ ಸಚಿವ ಸೋಮಣ್ಣ ಭೇಟಿ: ಸಂಜೆ 88ನೇ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

ಧರ್ಮಸ್ಥಳ: ಲಕ್ಷ ದೀಪೋತ್ಸವದ ಅಂಗವಾಗಿ ನಡೆಯುತ್ತಿರುವ 88ನೇ ಸರ್ವಧರ್ಮ ಸಮ್ಮೇಳನದ ಉದ್ಘಾಟನೆಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿದ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಶಾಸಕ ಹರೀಶ್ ಪೂಂಜ ಅವರು ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಳಿ ಸ್ವಾಗತಿಸಿದರು.

ಸಚಿವ ಸೋಮಣ್ಣ ದಂಪತಿಗಳು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪಾರ್ಥಿಸಿ, ಪೂಜೆ ಸಲ್ಲಿಸಿದರು. ಈ ಸಂದರ್ಭ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರ.ಕಾರ್ಯದರ್ಶಿ ಶ್ರೀನಿವಾಸ ರಾವ್, ತಾ.ಪಂ. ಸದಸ್ಯ ಕೊರಗಪ್ಪ ಗೌಡ, ರೈತ ಮೋರ್ಚಾ ಅಧ್ಯಕ್ಷ ಜಯಂತ ಗೌಡ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸುಧಾಕರ್ ಧರ್ಮಸ್ಥಳ, ಪಟ್ಟಣ ಪಂಚಾಯಿತಿ ಸದಸ್ಯ ಶರತ್ ಕುಮಾರ್, ವಿಎಚ್‌ಪಿ ಪ್ರಮುಖ್ ದಿನೇಶ್ ಚಾರ್ಮಾಡಿ, ಅಕ್ರಮ-ಸಕ್ರಮ ಸಮಿತಿ ಸದಸ್ಯೆ ಶಾರದ, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಅಶೋಕ್ ಕುಮಾರ್, ಪ್ರಮುಖರಾದ ದಿವಿನ್ ಚಾರ್ಮಾಡಿ, ಪ್ರೀತಂ ಧರ್ಮಸ್ಥಳ, ಗುಣಸಾಗರ, ಅಶೋಕ ಜೈನ್, ಕೃಷ್ಣ ಭಟ್ ಹಾಗೂ ಕಾರ್ಯಕರ್ತರುಗಳು ಇದ್ದರು.

error: Content is protected !!