ಧರ್ಮಸ್ಥಳ: ಶ್ರೀಮಂಜುನಾಥ ಸ್ವಾಮಿಯ ಲಲಿತೋದ್ಯಾನ ಉತ್ಸವ, ಲಕ್ಷದೀಪೋತ್ಸವದ ಮೂರನೇ ದಿನ ಶನಿವಾರದಂದು ರಾತ್ರಿ ನೆರವೇರಿತು. ಭಕ್ತಾಧಿಗಳು ಉತ್ಸವದಲ್ಲಿ ಪಾಲ್ಗೊಂಡು ಧನ್ಯತಾಭಾವವನ್ನು ಹೊಂದಿದರು. ನಾಲ್ಕನೇ ದಿನವಾದ ಇಂದು ಶ್ರೀ ಮಂಜುನಾಥಸ್ವಾಮಿಯ ಕಂಚಿಮಾರು ಕಟ್ಟೆ ಉತ್ಸವ ನಡೆಯಲಿದೆ. ಲಕ್ಷ ದೀಪೋತ್ಸವದ ಮೂರನೇ ದಿನ ದಿನ ಶುಕ್ರವಾರವಾರ ರಾತ್ರಿ ದೇವರನ್ನು ಪಲ್ಲಕ್ಕಿಯಲ್ಲಿ ಲಲಿತೋದ್ಯಾನ ಉತ್ಸವಕ್ಕೆ ಮೆರವಣಿಗೆ ಮೂಲಕ ಸಾಗಿತು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆದವು.
ಉತ್ಸವ ನಡೆದ ಬಳಿಕ ದೇವಸ್ಥಾನಕ್ಕೆ ಮರಳಿದ ದೇವರನ್ನು ಬೆಳ್ಳಿರಥದಲ್ಲಿ ದೇವಸ್ಥಾನದ ಸುತ್ತ ಒಂದು ಸುತ್ತು ಉತ್ಸವ ನಡೆಯಿತು.
ಲಲಿತಕಲಾ ಗೋಷ್ಠಿ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ಸಂಜೆ 7 ರಿಂದ ಝೀ ಕನ್ನಡ ಸರಿಗಮಪ ಖ್ಯಾತಿಯ ಸಾದ್ವಿನಿ ಕೊಪ್ಪ ತಂಡದವರಿಂದ ಸುಗಮ ಸಂಗೀತ ಹಾಗೂ ರಾತ್ರಿ 8.30ರಿಂದ ಬೆಂಗಳೂರಿನ ಸತ್ಯನಾರಾಯಣ ರಾಜು ಅವರಿಂದ ರಾಮಕಥಾ ನೃತ್ಯ ರೂಪಕ ಪ್ರದರ್ಶನಗೊಂಡಿತು.