ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀಮಂಜುನಾಥಸ್ವಾಮಿಯ ಕಂಚಿಮಾರು ಕಟ್ಟೆ ಉತ್ಸವ

ಧರ್ಮಸ್ಥಳ: ಲಕ್ಷದೀಪೋತ್ಸವದ ನಾಲ್ಕನೇ ದಿನ ಭಾನುವಾರ ರಾತ್ರಿ ಶ್ರೀಮಂಜುನಾಥ ಸ್ವಾಮಿಯ ಕಂಚಿಮಾರು ಕಟ್ಟೆ ಉತ್ಸವ ನೆರವೇರಿತು.

ಸಹಸ್ರಾರು ಸಂಖ್ಯೆಯ ಭಕ್ತಾಧಿಗಳು ಉತ್ಸವದಲ್ಲಿ ಪಾಲ್ಗೊಂಡು ಧನ್ಯತಾಭಾವವನ್ನು ಹೊಂದಿದರು.
ಕಾರ್ತಿಕ ಮಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವದ ನಾಲ್ಕನೇ ದಿನ ಭಾನುವಾರದಂದು ರಾತ್ರಿ ದೇವರನ್ನು ಪಲ್ಲಕ್ಕಿಯಲ್ಲಿ ಕಂಚಿಮಾರು ಕಟ್ಟೆ ಉತ್ಸವಕ್ಕೆ ಕೊಂಬು, ಕಹಳೆ, ಶಂಖ, ಜಾಗಟೆ, ಬಿರುದಾವಳಿಗೊಂದಿಗೆ ಮೆರವಣಿಗೆ ಮೂಲಕ ಸಾಗಿತು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆದವು.

ಉತ್ಸವ ನಡೆದ ಬಳಿಕ ದೇವಸ್ಥಾನಕ್ಕೆ ಮರಳಿದ ದೇವರನ್ನು ಬೆಳ್ಳಿರಥದಲ್ಲಿ ದೇವಸ್ಥಾನದ ಸುತ್ತ ಒಂದು ಸುತ್ತು ಉತ್ಸವ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಾನುವಾರ ರಾತ್ರಿ 8 ಗಂಟೆಯಿಂದ 10 ಗಂಟೆ ತನಕ ಬೆಂಗಳೂರಿನ ಸಂಗೀತ ಕಲಾರತ್ನ ಡಾ. ಆರ್. ಮಂಜುನಾಥ ಮತ್ತು ತಂಡದವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ಪ್ರದರ್ಶನಗೊಂಡಿತು.

error: Content is protected !!