ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ಆರೋಪ: ಮೂವರು ವಶಕ್ಕೆ

ಬೆಳ್ತಂಗಡಿ: ಮೇಲಂತ ಬೆಟ್ಟು ಗ್ರಾಮದ ಕಲ್ಲಗುಡ್ಡೆ ಬಳಿ ಬಾಡಿಗೆಗೆ ಪಡೆದುಕೊಂಡಿರುವ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದಲ್ಲಿ ಪೊಲೀಸರು ಬಾಡಿಗೆದಾರ ಹಾಗೂ‌‌ ಇತರ ಇಬ್ಬರನ್ನು ವಶಕ್ಕೆ ಪಡೆದಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.

ರಾಮಚಂದ್ರ ದೇವಾಡಿಗ ಎಂಬವರು ತಮ್ಮ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಬೆಳ್ತಂಗಡಿ ವೃತ್ತ ನಿರೀಕ್ಷಕರು ಡಿ. 14 ರಂದು ಬೆಳಗ್ಗೆ 10.45ರ ಸುಮಾರಿಗೆ ದಾಳಿ ನಡೆಸಿ, ವೇಶ್ಯಾವಾಟಿಕೆ ನಿರತರಾಗಿದ್ದ ಆರೋಪಿಗಳಾದ ಜನಾರ್ಧನ ಪೂಜಾರಿ, ಜನಾರ್ಧನ ಅವರನ್ನು ವಶಕ್ಕೆ ಪಡೆದಿದ್ದಾರೆ. ವೇಶ್ಯಾವಾಟಿಕೆಗೆ ಅನುವು ಮಾಡಿಕೊಟ್ಟ ಆರೋಪದಲ್ಲಿ ರಾಮಚಂದ್ರ ದೇವಾಡಿಗ ಅವರನ್ನೂ ‌ವಶಕ್ಕೆ ಪಡೆಯಲಾಗಿದೆ. ಈ ಸಂದರ್ಭ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ.

ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!