ಉಜಿರೆ ಬಾಲಕನ ಕಿಡ್ನಾಪ್: ₹ 17 ಕೋಟಿ ಬೇಡಿಕೆ ಇಟ್ಟ ಅಪಹರಣಕಾರರು!

 

ಬೆಳ್ತಂಗಡಿ: ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ರಥಬೀದಿಯ ಅಶ್ವತ್ಥ ಕಟ್ಟೆ ಸಮೀಪದ ನಿವಾಸಿ ಉದ್ಯಮಿ ಬಿಜೋಯ್ ಏಜೆನ್ಸಿಸ್ ಮಾಲಕ ಬಿಜೋಯ್ ಇವರ ಪುತ್ರ ಅನುಭವ್ (8) ನನ್ನು‌ ಡಿ.17 ರಂದು ಸಂಜೆ ಬಿಳಿ ಇಂಡಿಕಾ ಕಾರಿನಲ್ಲಿ ಮನೆಯ ಗೇಟ್ ಬಳಿಯಿಂದ 3 ರಿಂದ 4 ಮಂದಿ ಸೇರಿ ಬಾಲಕನನ್ನು ಅಪಹರಿಸಿದ್ದು, 17 ಕೋಟಿ‌ ರೂ. ನೀಡುವಂತೆ ಬೇಡಿಕೆಯನ್ನು ಇರಿಸಿದ್ದಾರೆ ಎಂದು ಬಾಲಕನ ಅಜ್ಜ ಶಿವನ್ ನಾಯರ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶಿವನ್ ಅವರು ವಾಕಿಂಗ್ ಹೋಗಿದ್ದು, ಮೊಮ್ಮಗ ಆಟವಾಡಿ ಅಜ್ಜನ ಎದುರಿನಿಂದ ಮನೆ ಕಡೆಗೆ ಹೋಗುತ್ತಿದ್ದ. ಮನೆಯ ಗೇಟು ಬಳಿ ತಲುಪುತ್ತಿದ್ದಂತೆ ಅಲ್ಲಿಯೆ ನಿಂತಿದ್ದ ಬಿಳಿ ಬಣ್ಣದ ಇಂಡಿಕಾ ಕಾರಿನಿಂದ ಇಬ್ಬರು ಅಪರಿಚಿತರು ಇಳಿದು ಬಾಲಕನನ್ನು ಬಲವಂತದಿಂದ ಕಾರಿನಲ್ಲಿ ಕುಳ್ಳಿರಿಸಿದ್ದಾರೆ. ಶಿವನ್ ಓಡಿ ಬಂದು‌ಕಾರಿನ ಬಾಗಿಲು ತೆಗೆಯಲು ಪ್ರಯತ್ನಿಸುವ ವೇಳೆಗೆ ಕಾರನ್ನು ಚಲಾಯಿಸಿಕೊಂಡು ರಥ ಬೀದಿ ಕಡೆಗೆ ತೆರಳಿದ್ದಾರೆ. ಬಳಿಕ

ಶಿವನ್ ಅವರ ಸೊಸೆಗೆ ಅಪಹರಣಕಾರರು ಪೋನ್ ಮಾಡಿ ಮಗನನ್ನು ಬಿಡಿಸಲು 100 ಬಿಟ್ ಕಾಯಿನ್ ಅಂದರೆ 17 ಕೋಟಿ ರೂ. ಬೇಡಿಕೆ ಇಟ್ಟಿರುವುದಾಗಿ ಶಿವನ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆಗೆ ಬಾಲಕನ ಅಜ್ಜ ಶಿವನ್ ನಾಯರ್ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

error: Content is protected !!