ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗೆ ರಾತ್ರಿ ಕರ್ಫ್ಯೂ: ಇಂದಿನಿಂದ ರಾಜ್ಯಾದ್ಯಂತ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಡಿ. 23 ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲು ಗುತ್ತಿ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

9 ದಿನಗಳ ಕಾಲ ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರುವುದರಿಂದ ಹೊಸವರ್ಷದ ಮಧ್ಯರಾತ್ರಿ ಆಚರಣೆಗೆ ಕಡಿವಾಣ ಬೀಳಲಿದೆ. ರಾತ್ರಿ 9ರನಂತರ ಬಸ್​ ಸಂಚಾರ ಇರುವುದಿಲ್ಲ. ಹೋಟೆಲ್​, ರೆಸ್ಟೋರೆಂಟ್​ಗಳೂ ಬಂದ್​ ಆಗಲಿವೆ. ವ್ಯಾಪಾರ, ವಹಿವಾಟುಗಳಿಗೂ‌ ಬ್ರೇಕ್ ಬೀಳಲಿದೆ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ರಾಜ್ಯ ಸರಕಾರ ಇಂದು ಸಂಜೆ 5ಗಂಟೆಯೊಳಗೆ ನೈಟ್​ಕರ್ಫ್ಯೂ ಸಂಬಂಧಿತ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದಿದ್ದಾರೆ.

error: Content is protected !!