ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಡಿ. 24 ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಆದರೆ ನೈಟ್ಕರ್ಫ್ಯೂ ಸಂಬಂಧಿತ ಮಾರ್ಗಸೂಚಿ.
ಬಿಡುಗಡೆ ಮಾಡುವ ಸಂದರ್ಭದಲ್ಲಿ ಸಮಯದಲ್ಲಿ ವಿನಾಯಿತಿ ನೀಡಲಾಗಿದೆ. ಡಿ.24 ರಿಂದ 2ರವರೆಗೆ ಜಾರಿಯಾಗಲಿದ್ದು, 11ರಿಂದ ಬೆಳಗ್ಗೆ 5ವೆರೆಗೆ ಕರ್ಫ್ಯೂ ಇರಲಿದೆ.
ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಅದೇ ರೀತಿ ಕ್ರಿಸ್ ಮಸ್ ಆಚರಣೆ ಅಂಗವಾಗಿ ಪ್ರಾರ್ಥನೆ ಸಲ್ಲಿಸಲು ವಿನಾಯಿತಿ ನೀಡಲಾಗಿದೆ.