ನೈಟ್ ಕರ್ಫ್ಯೂ ‌ರದ್ದು: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.‌ ಕೋವಿಡ್ ತಡೆಗೆ ಹೇರಲು ನಿರ್ಧರಿಸಿದ್ದ ರಾತ್ರಿ ಕರ್ಫ್ಯೂ ಸರಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಗುರುವಾರ ಪ್ರಕಟಣೆ ಹೊರಡಿಸಿದ್ದು, ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಕೋವಿಡ್ ವೈರಾಣುವಿನ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂ ಜಾರಿಗೆ ತರಲು ತೀರ್ಮಾನಿಸಲಾಗಿತ್ತು ಎಂದು ತಿಳಿಸಿದ್ದಾರೆ. ಆದರೆ ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮ ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಬೇಕು ಎಂದು ಮನವಿ ಮಾಡಿದ್ದಾರೆ.

error: Content is protected !!