ಬೆಳ್ತಂಗಡಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಕೃಷಿ ಮಸೂದೆಯ ಸತ್ಯ ಮತ್ತು ಮಿತ್ತ ಪುಸ್ತಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಬೆಳ್ತಂಗಡಿ ತಾಲೂಕಿನ 5 ಸಾವಿರ ಗಣ್ಯರಿಗೆ, ಪ್ರಮುಖರಿಗೆ, ರೈತರಿಗೆ ಸಮಗ್ರವಾಗಿ ಕೃಷಿ ಮಸೂದೆ ಮಾಹಿತಿ ತಲುಪಿಸುವ ಉದ್ದೇಶದಿಂದ ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲ ವತಿಯಿಂದ ಅಭಿಯಾನಕ್ಕೆ ಚಾಲನೆ ನೀಡಿದೆ. ಕೃಷಿ ಮಸೂದೆ ಸತ್ಯ ಮತ್ತು ಮಿತ್ಯ ತಿಳಿಯಪಡಿಸುವ ಉದ್ದೇಶ ಪುಸ್ತಕದ್ದಾಗಿದೆ ಎಂದು ಹೇಳಿದರು.
ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷೆ ಶಾರದಾ ಆರ್.ರೈ. ಉಪಸ್ಥಿತರಿದ್ದರು.