ರಜನಿಕಾಂತ್ ‌ಆಸ್ಪತ್ರೆಗೆ ದಾಖಲು: ರಕ್ತದೊತ್ತಡದಲ್ಲಿ ತೀವ್ರ ಏರಿಳಿತ

ಚೆನ್ನೈ: ರಕ್ತದೊತ್ತಡದಲ್ಲಿ ತೀವ್ರ ಏರಿಳಿತದ ಹಿನ್ನೆಲೆಯಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನ ಅಪೊಲೊ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಅಪೊಲೊ ಆಸ್ಪತ್ರೆ ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದ್ದು, ರಜನಿಕಾಂತ್ ‌ಅವರಿಗೆ COVID-19 ಲಕ್ಷಣಗಳು ಕಂಡುಬಂದಿಲ್ಲ. ಅವರ ರಕ್ತದೊತ್ತಡ ತೀವ್ರ ಏರಿಳಿತ ತೋರಿಸಿತು ಮತ್ತು ಹೆಚ್ಚಿನ ಮೌಲ್ಯಮಾಪನದ ಅಗತ್ಯವಿದ್ದುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡ ಏರಿಳಿತದ ಹೊರತಾಗಿ ಯಾವುದೇ ಗಂಭೀರ ‌ಸಮಸ್ಯೆಗಳಿಲ್ಲ ಎಂದು ತಿಳಿಸಿದ್ದಾರೆ.

error: Content is protected !!