ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಜನುಮದಿನ: ರಾಷ್ಟ್ರೀಯ ಗಣಿತ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನುಮದಿನದ ಸ್ಮರಣಾರ್ಥ ರಾಷ್ಟ್ರೀಯ ಗಣಿತ ದಿನಾಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್, ರಾಮಾನುಜನ್‌ ಅವರು ಗಣಿತ ಕ್ಷೇತ್ರದಲ್ಲಿ ನಡೆಸಿದ ಸಂಶೋಧನಾ ಕೊಡುಗೆಗಳನ್ನು ವಿವರಿಸಿದರು.

ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ವೆಬಿನಾರ್ ಆಯೋಜಿಸಲಾಗಿತ್ತು. ಕಾಲೇಜಿನ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ ಅವರು ಶ್ರೀನಿವಾಸ ರಾಮಾನುಜನ್ ಅವರ ಜೀವನ ಚರಿತ್ರೆ ಕುರಿತು ವಿವರಿಸಿದರು.

error: Content is protected !!