ಬಸ್ ಅಪಘಾತ: 8 ಸಾವು: ಮದುವೆಗೆ ಹೊರಟಿದ್ದವರು ಮಸಣಕ್ಕೆ: ಹಲವರಿಗೆ ಗಂಭೀರ ಗಾಯ: ಕೇರಳ ಸಿ.ಎಂ. ಸಂತಾಪ

ಸುಳ್ಯ: ಸುಳ್ಯದಿಂದ ಪಾಣತ್ತೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಎಂಟು ಜನ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಕೇರಳ ಗಡಿಭಾಗದ ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ನಡೆದಿದೆ.

ಪುತ್ತೂರಿನ ಖಾಸಗಿ ಬಸ್ ಮದುವೆ ಸಮಾರಂಭಕ್ಕೆಂದು ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದಲ್ಲದೆಬಸ್ ಸಮೀಪದ ವ್ಯಕ್ತಿಯೋರ್ವರ ಮನೆಗೂ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ 8 ಮಂದಿ ಮೃತಪಟ್ಟು . ಹಲವರು ಗಂಭೀರ ಗಾಯಗೊಂಡಿದ್ದಾರೆ. ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತ ನಡೆದ ಸ್ಥಳ ಕೇರಳ ಗಡಿ ಭಾಗವಾಗಿರುವುದರಿಂದ ರಾಜಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಸಂತಾಪ ವ್ಯಕ್ತಪಡಿಸಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!