ಶಿವಮೊಗ್ಗ ಸ್ಫೋಟ ಪ್ರಕರಣ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶ

ಶಿವಮೊಗ್ಗ: ಕಳೆದ ರಾತ್ರಿ ಶಿವಮೊಗ್ಗದ ಹುಣಸೋಡು ಸಮೀಪ ಕಲ್ಲು ಕ್ವಾರಿಯಲ್ಲಿ ಸ್ಫೋಟಕ ವಸ್ತು ತುಂಬಿದ ಲಾರಿ ಸ್ಫೋಟಗೊಂಡು ಹಲವು ಮಂದಿ ಸಾವನ್ನಪ್ಪಿದ ಘಟನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರ ಶಾಂತಿ ಕೋರುತ್ತಾ ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರೆಲ್ಲರೂ ಶ್ರೀಘ್ರವೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಲಾಗಿದ್ದು ಕಠಿಣ ಕ್ರಮ ನಿಶ್ಚಿತ ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

error: Content is protected !!