ಪ್ರಶ್ನೆ ಪತ್ರಿಕೆ ಸೋರಿಕೆ 6 ಮಂದಿ ಬಂಧನ, ನಾಳೆ ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಇಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗಿತ್ತು. ನಾಳೆ ಎರಡು ಅವಧಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು.ಆದರೆ ಕೆಲ ದುಷ್ಕರ್ಮಿಗಳು ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ನಾಳೆ ನಡೆಯಬೇಕಾಗಿದ್ದ ಎಫ್‌ಡಿಎ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ‌ ಸಂಬಂಧ ಲೋಕಾಸೇವಾ ಆಯೋಗ ಪ್ರಕಟಣೆ ಹೊರಡಿಸಿದ್ದು, ನಾಳೆ ನಡೆಯಬೇಕಾಗಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ತಿಳಿಸಿದೆ.ಈ ಸಂಬಂಧ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿದ್ದು, ಚಂದ್ರು, ರಾಚಪ್ಪ ಎಂಬ ಆರೋಪಿಗಳು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಜೊತೆಗೆ ಪ್ರಶ್ನೆಪತ್ರಿಕೆಗಳನ್ನು ಜಪ್ತಿ ಮಾಡಿದ್ದಾರೆ. ಸೋರಿಕೆ ಸಂಬಂಧ ಸಿಸಿಬಿ ಪೊಲೀಸರು ಲೋಕಸೇವಾ ಆಯೋಗಕ್ಕೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

error: Content is protected !!