ಶಾಲಾ ಶೈಕ್ಷಣಿಕ ಪ್ರವಾಸ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಲಹೆಗೆ ಶಿಕ್ಷಣ ಸಚಿವರ ಮೆಚ್ಚುಗೆ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸದ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದು ಪ್ರತಿವರ್ಷ ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಶಾಲಾ-ಕಾಲೇಜುಗಳ ಶೈಕ್ಷಣಿಕ ಪ್ರವಾಸ ಏರ್ಪಡಿಸುವುದರಿಂದ ಎಲ್ಲಾ ತೀರ್ಥಕ್ಷೇತ್ರಗಳಲ್ಲಿ ದೇವರ ದರ್ಶನ, ಊಟ, ವಸತಿ ಹಾಗೂ ವೀಕ್ಷಣೆ ಬಗ್ಗೆ ಒತ್ತಡ ಮತ್ತು ಸಮಸ್ಯೆಗಳು ಉಂಟಾಗುತ್ತವೆ. ವಿದ್ಯಾರ್ಥಿಗಳು ಯಾವುದೇ ಒತ್ತಡ ಇಲ್ಲದೆ ಸಾವಧಾನವಾಗಿ ಆಸಕ್ತಿಯಿಂದ ದೇವಾಲಯಗಳು ಹಾಗೂ ಪ್ರೇಕ್ಷಣೀಯ ತಾಣಗಳನ್ನು ವೀಕ್ಷಿಸಿದಾಗ ಜ್ಞಾನಾರ್ಜನೆಯೊಂದಿಗೆ ಶೈಕ್ಷಣಿಕ ಪ್ರವಾಸ ಸಾರ್ಥಕವಾಗುತ್ತದೆ. ಆದುದರಿಂದ ಪ್ರತೀ ವರ್ಷ ಸೆಪ್ಟೆಂಬರ್‌ ನಿಂದ ಡಿಸೆಂಬರ್ ಒಳಗೆ ಶೈಕ್ಷಣಿಕ ಪ್ರವಾಸ ಆಯೋಜಿಸಿದಲ್ಲಿ ಶೈಕ್ಷಣಿಕ ಪ್ರವಾಸ ಕಾಟಾಚಾರಕ್ಕಾಗಿ ಆಗದೆ ಅರ್ಥಪೂರ್ಣವಾಗಿ ಸಂತಸದಾಯಕ ಕಲಿಕೆಯೂ ಆಗುತ್ತದೆ ಎಂದು ಬರೆದಿದ್ದರು.

ಈ ಸಲಹೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಿಕ್ಷಣ ಸಚಿವರು ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ತಕ್ಷಣ ಸೂಕ್ತ ಆದೇಶ ನೀಡುವುದಾಗಿ ಹೆಗ್ಗಡೆಯವರಿಗೆ ಬರೆದ ಪತ್ರದಲ್ಲಿ ಸಚಿವರು ತಿಳಿಸಿದ್ದಾರೆ.

error: Content is protected !!