ಪತ್ರಕರ್ತರ ಗ್ರಾಮ ವಾಸ್ತವ್ಯ: ಆರೋಗ್ಯ ಶಿಬಿರ ಹಾಗು ರಕ್ತದಾನ ಶಿಬಿರ ಉದ್ಘಾಟನೆ

ಕೊಂಬಾರು: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆಗೊಂಡಿತುು.

ದಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಉದ್ಘಾಟಿಸಿದರು. ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.

error: Content is protected !!