ಧರ್ಮಸ್ಥಳಕ್ಕೆ‌ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಭೇಟಿ

ಉಜಿರೆ: ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಕೆ.ಎಸ್. ಈಶ್ವರಪ್ಪ ಭಾನುವಾರ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.
ಶಾಸಕ ಹರೀಶ್ ಪೂಂಜ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉಪಸ್ಥಿತರಿದ್ದರು.

error: Content is protected !!