ಬೆಂಗಳೂರು: ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಇದರ ಜೀರ್ಣೋದ್ಧಾರಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ 50 ಲಕ್ಷ ರೂ. ಅನುದಾನ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಬಿ.ಎಸ್. ಯಡಿಯೂರಪ್ಪ ಅವರನ್ನು ಬೇಟಿಯಾಗಿದ್ದು, ದೇವಸ್ಥಾನದ ಜೀರ್ಣೋದ್ಧಾಕ್ಕೆ ಅನುದಾನ ಒದಗಿಸಲು ಮನವಿ ಮಾಡಿದ್ದರು. ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು ₹ 50 ಲಕ್ಷ ಅನುದಾನಕ್ಕೆ ಆದೇಶ ನೀಡಿದ್ದಾರೆ.