ಮಂಗಳೂರು: ನಗರದ ಕಾಟಿಪಳ್ಳ ಎಂಬಲ್ಲಿ ರೌಡಿಶೀಟರ್ ಮೇಲೆ ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಘಟನೆ ನಡೆದಿದೆ. ಸ್ವಿಪ್ಟ್ ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ
ಕಾಟಿಪಳ್ಳದ ರೌಡಿಶೀಟರ್ ಪಿಂಕಿ ನವಾಸ್ ಮೇಲೆ ದಾಳಿ ನಡೆಸಿದವರನ್ನು ರೌಡಿಶೀಟರ್ ಶಕೀಬ್ ಮತ್ತು ಆತನ ನಾಲ್ವರು ಸಹಚರ ರು ಎಂದು ತಿಳಿದುಬಂದಿದೆ.
ದಾಳಿ ನಡೆಸಿದ ಶಕೀಬ್ ಸರಗಳ್ಳತನ ಪ್ರಕರಣದ ಆರೋಪಿ ಯಾಗಿದ್ದಾನೆ. ಗಂಭೀರ ಗಾಯಗೊಂಡಿರುವ ಪಿಂಕಿ ನವಾಸ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಿಂಕಿ ನವಾಸ್ ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಘಟನೆ ನಡೆದ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಯಾವ ಉದ್ಧೇಶಕ್ಕಾಗಿ ಕೊಲೆಯತ್ನ ನಡೆಸಿದ್ದಾರೆ ಎಂದು ತನಿಖೆಯಿಂದ ತಿಳಿದುಬರಬೇಕಾಗಿದೆ.
ನಗರದ ಹೊರ ವಲಯದ ಕಾಟಿಪಳ್ಳ 8ನೇ ಬ್ಲಾಕ್‌ನಲ್ಲಿ ಬುಧವಾರ ಸಂಜೆ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಝ್ ಎಂಬಾತನ ಕೊಲೆಗೆ ಯತ್ನ ನಡೆದಿದೆ.
ತಂಡವೊಂದು ಮಾರಕಾಯುಧಗಳಿಂದ ಗಂಭೀರ ಸ್ವರೂಪದಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಾಯಾಳುವನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ಎರಡು ವರ್ಷದ ಹಿಂದೆ ಕಾಟಿಪಳ್ಳದಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ನ್ಯಾಯಾಂಗ ಬಂಧನದಲ್ಲಿದ್ದ ಈತ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ. ಈತನ ವಿರುದ್ಧ ಗಾಂಜಾ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.