ಫೆ 12 ರಂದು ಉಜಿರೆಯಲ್ಲಿ “ರಾಷ್ಟ್ರೀಯ ಶಿಕ್ಷಣ ನೀತಿ- ಅನುಷ್ಠಾನದ ಸವಾಲುಗಳು” ವಿಚಾರ ಸಂಕಿರಣ

ಉಜಿರೆ: “ರಾಷ್ಟ್ರೀಯ ಶಿಕ್ಷಣ ನೀತಿ – ಅನುಷ್ಠಾನದ ಸವಾಲುಗಳು” ಎಂಬ ವಿಷಯದ ಬಗ್ಗೆ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಆಶ್ರಯದಲ್ಲಿ ಫೆ 12 ಶುಕ್ರವಾರ ವಿಚಾರ ಸಂಕಿರಣ ನಡೆಯಲಿದೆ.

ಸಿದ್ಧವನ ಗುರುಕುಲದಲ್ಲಿ ಶುಕ್ರವಾರ ಬೆಳಿಗ್ಗೆ ಹತ್ತು ಗಂಟೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ.

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿಶ್ರಾಂತ ಕುಲಸಚಿವ ಪ್ರೊ. ಎ.ಎಂ. ನರಹರಿ ಶುಭಾಶಂಸನೆ ಗೈಯಲಿದ್ದಾರೆ.

ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಎಸ್. ಸತೀಶ್ಚಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಸವಾಲುಗಳ ಬಗ್ಗೆ ಕರ್ನಾಟಕ ಜಾನಪದ ವಿ. ವಿ. ಯ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅಭಿಪ್ರಾಯ ಸಾದರ ಪಡಿಸಲಿದ್ದಾರೆ.

ಬೆಳಾಲು ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಮಂಗಳೂರು ವಿ.ವಿ. ಯ ಪ್ರೊ. ರಾಜಾರಾಮ ತೋಳ್ಪಾಡಿ ಮತ್ತು ಮುಂಡಾಜೆಯ ಶಿಕ್ಷಕ ಅರವಿಂದ ಚೊಕ್ಕಾಡಿ ಮಾಹಿತಿ, ಮಾರ್ಗದರ್ಶನ ನೀಡಲಿದ್ದಾರೆ.

error: Content is protected !!