ನವದೆಹಲಿ: ಇಂದಿಗೆ ಪುಲ್ವಾಮಾ ಭಯೋತ್ಪಾದಕ ದಾಳಿಯ ಕರಾಳ ನೆನಪಿಗೆ ಎರಡು ವರ್ಷ. 2019ರ ಫೆ. 14ರಂದು ಭಯೋತ್ಪಾದಕ ದಾಳಿ ನಡೆದಿತ್ತು.
ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಹೊತ್ತ ಬಸ್‌ಗೆ ಸ್ಫೋಟಕಗಳನ್ನು ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿದ ಪರಿಣಾಮ, ಭಾರತೀಯ ಯೋಧರು ವೀರಮರಣವನ್ನಪ್ಪಿದ್ದರು. ಉಗ್ರರ ಅಟ್ಟಹಾಸಕ್ಕೆ ಸಿಲುಕಿ 39ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದರು. ಅನೇಕರು ಗಂಭೀರವಾಗಿ ಗಾಯಗೊಂಡಿದ್ದರು.
ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿತು. ದಾಳಿಯ ನಂತರ ಭಾರತವು ತಕ್ಕ ಪ್ರತ್ಯುತ್ತರ ನೀಡಿತ್ತು. ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಯ ಬಾಲಕೋಟ್ನಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ವಾಯುದಾಳಿ ನಡೆಸಿತ್ತು. ಪುಲ್ವಾಮಾ ಘಟನೆಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು ಇಡೀ ದೇಶಾದ್ಯಂತೆ ಈ ಗೌರವ ಸಲ್ಲಿಸಲಾಗುತ್ತಿದೆ.