ಪರೀಕ್ಷೆಯ ಸೋಲು ಬದುಕಿನ ಸೋಲಲ್ಲ – ಯೋಗೀಶ್ ಕೈರೋಡಿ: ಬಿರ್ವ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ

ಬೆಳ್ತಂಗಡಿ : ‘ಇಂದು ತನ್ನ ವ್ಯಕ್ತಿತ್ವವನ್ನು ಅಭಿವ್ಯಕ್ತಿಗೊಳಿಸಲು ಮುಕ್ತ ಅವಕಾಶಗಳಿದ್ದಾವೆ. ಪ್ರತಿಯೊಬ್ಬರಲ್ಲೂ ಸಾಧನೆಯ ಕಡೆಗೆ ಸಾಗುವ ತುಡಿತವಿರಬೇಕು . ಸಾಧನೆಯ ಪರೀಕ್ಷೆಯಲ್ಲಿ ಆಗುವ ಸೋಲು ಬದುಕಿನ ಸೋಲಲ್ಲ’ ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಯೋಗೀಶ್ ಕೈರೋಡಿ ಹೇಳಿದರು.

ಅವರು ಭಾನುವಾರ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬಿರ್ವ ಚಾರಿಟೇಬಲ್ ಟ್ರಸ್ಟ್ ನಾರಾವಿ ಇದರ ವತಿಯಿಂದ ಟ್ರಸ್ಟ್ ನ ಪ್ರಾಯೋಜಕತ್ವದ ವಿದ್ಯಾರ್ಥಿಗಳಿಗೆ ನಡೆದ ಅಂತರ್ ಜಿಲ್ಲಾ ಮಟ್ಟದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.

‘ಬಡಪಾಯಿ ಕುಟುಂಬದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ದತ್ತು ಸ್ವೀಕರಿಸಿ ವಿದ್ಯಾಭ್ಯಾಸ ನೀಡುತ್ತಿರುವುದು ಟ್ರಸ್ಟ್ ನ ಬಹುದೊಡ್ಡ ಸೇವಾ ಕಾರ್ಯವಾಗಿದೆ. ಈ ವಿದ್ಯಾರ್ಥಿಗಳು ನಿಜವಾಗಿಯೂ ಪುಣ್ಯವಂತರಾಗಿದ್ದಾರೆ. ಟ್ರಸ್ಟ್ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡುವ ಜೊತೆಗೆ ಅವರ ಪ್ರತಿಭೆಗೆ ವೇದಿಕೆ ಕಲ್ಪಿಸುತ್ತಿರುವುದು ಶ್ಲಾಘನೀಯ ಕಾರ್ಯ’ ಎಂದರು.

ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಇದರ ಉಪಾಧ್ಯಕ್ಷ, ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಬಿರ್ವ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ವೀರಮ್ಮ ಸಂಜೀವ ಸಾಲಿಯಾನ್ ಡೊಂಕಬೆಟ್ಟು ಅಧ್ಯಕ್ಷತೆಯನ್ನು ವಹಿಸಿದ್ದರು.

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್, ಉದ್ಯಮಿ ಜಯರಾಮ ಬಂಗೇರ ವೇದಿಕೆಯಲ್ಲಿದ್ದರು.

ಟ್ರಸ್ಟ್ ನ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್ ಡೊಂಕಬೆಟ್ಟು ಪ್ರಸ್ತಾವಿಕವಾಗಿ ಮಾತನಾಡಿದರು.

ಶ್ರೀ ಗುರುದೇವ ಕಾಲೇಜಿನ ಉಪನ್ಯಾಸಕರಾದ ರಾಕೇಶ್ ಕುಮಾರ್ ಸ್ವಾಗತಿಸಿ, ಗಣೇಶ್ ಶಿರ್ಲಾಲ್ ವಂದಿಸಿದರು. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

error: Content is protected !!