ಕಾಟಾಜೆ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

ನೆರಿಯ:ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರದಿಂದ ದೇವಸ್ಥಾನಕ್ಕೆ 25 ಲಕ್ಷ ಬಿಡುಗಡೆಯಾಗಿದೆ, ಕೆಲವೇ ದಿನಗಳಲ್ಲಿ ದೇವಸ್ಥಾನದ ಖಾತೆಗೆ ಬರಲಿದೆ ಎಂದು ತಿಳಿಸಿದರು. ಅಣಿಯೂರಿನಿಂದ ಪರ್ಪಳವರೆಗೆ ರಸ್ತೆ ಅಭಿವೃದ್ಧಿಗೆ ಹಣ ಬಿಡುಗಡೆಗೊಳಿಸಲಾಗುವುದು.ಈಗ ರಸ್ತೆ ಅಗಲೀಕರಣಗೊಳಿಸಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ನಂತರ ರಸ್ತೆ ಕಾಮಾಗಾರಿ ನಡೆಸಲಾಗುವುದು ಎಂದರು. ಬಹ್ಮಕಲಶೋತ್ಸವದ ಸಮಯದಲ್ಲಿ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಹೇಗೆ ನಿರ್ವಹಿಸಬೇಕು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಆಡಳಿತ ಮೊಕ್ತೇಸರ ಕೃಷ್ಣ ಕುಮಾರ್ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯಾದೇವ್ ಪ್ರಧಾನ ಕಾರ್ಯದರ್ಶಿ ಪಿ.ಕೆ.ರಾಜನ್ ಬಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ಸತೀಶ್ ಕುಳೆನಾಡಿ ಗ್ರಾ ಪಂ.ಅಧ್ಯಕ್ಷೆ ವಸಂತಿ ಧರ್ಮಸ್ಧಳ ಗ್ರಾಮಾಭಿವೃಧ್ಧಿ ಯೋಜನೆಯ ನೆರಿಯ ಬಯಲು ಒಕ್ಕೂಟದ ಅಧ್ಯಕ್ಷ ಸತೀಶ್ ಕುಕ್ಕೆಜಾಲು ಬಹ್ಮಕಲಶೋತ್ಸವ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಧರು ಉಪಸ್ಧಿತರಿದ್ದರು

error: Content is protected !!