ಫೆ 28 ಬೆಳ್ತಂಗಡಿ ರೋಟರಿ ಸೇವಾ ಟ್ರಸ್ಟ್ ಸಭಾಭವನ, ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟನೆ

ಬೆಳ್ತಂಗಡಿ : ‘ಬೆಳ್ತಂಗಡಿ ರೋಟರಿ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಸುವರ್ಣ ಮಹೋತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ನೂತನವಾಗಿ ನಿರ್ಮಿಸಿರುವ ಬೆಳ್ತಂಗಡಿ ರೋಟರಿ ಸೇವಾ ಟ್ರಸ್ಟ್ ಸಭಾಭವನದ ಉದ್ಘಾಟನೆ ಹಾಗೂ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ ಫೆ.28ರಂದು ನಡೆಯಲಿದೆ’ ಎಂದು ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ.ಧನಂಜಯ ರಾವ್ ಹೇಳಿದರು.

ಅವರು ಬುಧವಾರ ಬೆಳ್ತಂಗಡಿ ಪ್ರವಾಸಿ ಬಂಗಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ‘ ¸ಸಮಾಜಸೇವೆಯನ್ನೇ ತನ್ನ ಉದ್ದೇಶವಾಗಿಸಿಕೊಂಡ ಬೆಳ್ತಂಗಡಿ ರೋಟರಿ ಕ್ಲಬ್‍ಗೆ ಪ್ರಸ್ತುತ ವರ್ಷ 50 ವರ್ಷ ತುಂಬಿದ್ದು, ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಸದಸ್ಯರ, ಆರ್.ಸಿ.ಸಿ. ಇಂಟರಾಕ್ಟ್ ಹಾಗೂ ಆನ್ಸ್ ಕ್ಲಬ್ ಸಹಕಾರದೊಂದಿಗೆ ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆಯೂ ‘ರೋಟರಿ ಅವಕಾಶಗಳನ್ನು ತೆರೆಯುತ್ತದೆ’ ಎಂಬ ಧ್ಯೇಯ ವಾಕ್ಯದೊಂದಿಗೆ ತಾಲ್ಲೂಕಿನಾದ್ಯಂತ ಜನ ಸಾಮಾನ್ಯರಿಗೆ ಉಪಯುಕ್ತವಾದ ವಾಟರ್ ಬ್ಯಾಂಕ್, ಕಟ್ಟೆ ಕಟ್ಟೋಣ ಬನ್ನಿ, ಮಾಸ್ಕ್ ವಿತರಣೆ, ಸ್ಯಾನಿಟೈಸರ್ ಸ್ಟ್ಯಾಂಡ್ ವಿತರಣೆ ಮುಂತಾದ ಸುಮಾರು 600ಕ್ಕಿಂತಲೂ ಹೆಚ್ಚು ಸಾಮಾಜಿಕ ಕಾರ್ಯಗಳನ್ನು ಸಂಘಟಿಸಿ ರಾಷ್ಟ್ರ ಮಟ್ಟದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡು ಬಂದಿದೆ.

ಇದೀಗ ಕಾಶಿಬೆಟ್ಟು ಅರಳಿ ರಸ್ತೆಯಲ್ಲಿ 1.65 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ 8500 ಚದರ ಅಡಿ ವಿಶಾಲದ ಒಳಾಂಗಣ ಕ್ರೀಡಾಂಗಣ ಹಾಗೂ ಕೆ. ರಮಾನಂದ ಸಾಲ್ಯಾನ್ ಸ್ಮರಣಾರ್ಥ ಹವಾ ನಿಯಂತ್ರಿತ ಸಭಾಂಗಣವನ್ನು ಹೊಂದಿ ಸಾರ್ವಜನಿಕರ ಸೇವಾ ಕಾರ್ಯಗಳಿಗೆ ಸಿದ್ದವಾಗಿ ನಿಂತಿರುವ ಬೆಳ್ತಂಗಡಿ ರೋಟರಿ ಸೇವಾ ಟ್ರಸ್ಟ್ ಸಭಾ ಭವನವನ್ನು ಫೆ 28 ಆದಿತ್ಯವಾರ ಬೆಳಿಗ್ಗೆ 10.30ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ, ವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲಾ ಗವರ್ನರ್ ಎಂ.ರಂಗನಾಥ್ ಭಟ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರುಗಳಾದ ಕೆ. ಹರೀಶ್ ಕುಮಾರ್, ಕೆ.ಪ್ರತಾಪಸಿಂಹ ನಾಯಕ್ ಹಾಗೂ ಸಹಾಯಕ ಗವರ್ನರ್ ಡಾ. ಯತಿಕುಮಾರ ಸ್ವಾಮಿ ಗೌಡ, ವಲಯ ಸೇನಾನಿ ಮೋನಪ್ಪ ಪೂಜಾರಿ ಬಾಗವಹಿಸಲಿದ್ದು, ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ.ಧನಂಜಯ ರಾವ್ ವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೋಟರಿ ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾದ್ಯಕ್ಷ ಡಾ. ಶಶಿಧರ ಡೋಂಗ್ರೆ, ರೋಟರಿ ಸೇವಾ ಟ್ರಸ್ಟ್‍ನ ಅಧ್ಯಕ್ಷ ನಿವೃತ್ತ ಮೇಜರ್ ಜನರಲ್ ಎಂ.ವಿ.ಭಟ್, ಕೋಶಾಧಿಕಾರಿ ಶ್ರೀಕಾಂತ್ ಕಾಮತ್, ಕ್ಲಬ್‍ನ ಪೂರ್ವಾಧ್ಯಕ್ಷ ಹಾಗೂ ರೋಟರ್ ಪತ್ರಿಕೆಯ ಸಂಪಾದಕ ದಯಾನಂದ ನಾಯಕ್, ಕ್ಲಬ್‍ನ ಕಾರ್ಯದರ್ಶಿ ಶ್ರೀಧರ ಕೆ.ವಿ, ಕೋಶಾಧಿಕಾರಿ ಮಿಥುನ್ ಮಾಡ್ತಾ, ನಿಯೋಜಿತ ಅಧ್ಯಕ್ಷ ಶರತ್‍ಕೃಷ್ಣ ಪಡ್ವೆಟ್ನಾಯ ಉಪಸ್ಥಿತರಿದ್ದರು.

error: Content is protected !!