ಅರಣ್ಯ ವಾಸಿಗಳಿಗೆ ಮೂಲಭೂತ ಸೌಕರ್ಯ, ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

ಬೆಂಗಳೂರು: ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಬಗ್ಗೆ‌ ಕರ್ನಾಟಕ ಸರ್ಕಾರದ ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿಯವರು ವಿಧಾನಸೌಧದಲ್ಲಿ ಅರಣ್ಯ ಪ್ರದೇಶಗಳನ್ನೊಳಗೊಂಡ ವಿಧಾನಸಭಾ ಕ್ಷೇತ್ರಗಳ ಶಾಸಕರ ಸಭೆಯನ್ನು ನಡೆಸಿ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅರಣ್ಯದಂಚಿನ ವಾಸಿಸುವ ಜನರ ಮೂಲಭೂತ ಸೌಕರ್ಯಗಳಾದ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳನ್ನು ಪರಿಹಾರ ನೀಡುವ ಉದ್ಧೇಶದಿಂದ ಸಭೆ ನಡೆಸಿದರು.

ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಈದಿನ ನಡೆದ ಸಭೆಯು ಅತ್ಯಂತ ಮಹತ್ವಪೂರ್ಣ ಹಾಗೂ ಯಶಸ್ವಿಯಾಗಿದ್ದು, ಅರಣ್ಯದಂಚಿನ ಜನರ ಬಹುದಿನಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅರಣ್ಯ ಸಚಿವರಾದ ಸನ್ಮಾನ್ಯ ಶ್ರೀ ಅರವಿಂದ ಲಿಂಬಾವಳಿ ಅವರಿಗೆ ತುಂಬುಹೃದಯದ ಧನ್ಯವಾದಗಳು ಸಲ್ಲಿಸಿದ್ದಾರೆ

error: Content is protected !!