ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಗೌಡ ನಾವೂರು ಆಯ್ಕೆ

ಬೆಳ್ತಂಗಡಿ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ ಇವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿಯಲ್ಲಿ ನಡೆದ ಮಂಡಲ ಕಾರ್ಯಕಾರಿಣಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಗಣೇಶ್ ಗೌಡ ನಾವೂರು ಅವರನ್ನು ನೂತನ ಪ್ರಧಾನ ಕಾರ್ಯದರ್ಶಿಯಾಗಿ ಘೋಷಣೆ ಮಾಡಲಾಯಿತು.

ಈಗಾಗಲೇ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಗಣೇಶ್ ಗೌಡ ಕೂಡಾ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ

error: Content is protected !!