ಭಾರತವನ್ನು ಕೊರೊನಾ ಮುಕ್ತಗೊಳಿಸೋಣ: ನರೇಂದ್ರ ಮೋದಿ: ಕೋವಿಡ್ ಲಸಿಕೆ ಪಡೆದು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ

ದೆಹಲಿ: ದೆಹಲಿಯ ಏಮ್ಸ್‌ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿ
ಏಮ್ಸ್​ನಲ್ಲಿ ನನ್ನ ಮೊದಲ ಡೋಸ್ ಕೋವಿಡ್​ ಲಸಿಕೆ ತೆಗೆದುಕೊಂಡಿದ್ದೇನೆ. ಕೊರೊನಾ ವಿರುದ್ಧದ ಜಾಗತಿಕ ಹೋರಾಟ ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ.

ಲಸಿಕೆ ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಈ ಮೂಲಕ ಮನವಿ ಮಾಡುತ್ತೇನೆ. ಒಟ್ಟಾಗಿ ನಾವು ಭಾರತವನ್ನು ಕೊರೊನಾ ಮುಕ್ತಗೊಳಿಸೋಣ” ಎಂದು ಟ್ವೀಟ್​ ಮಾಡಿದ್ದಾರೆ. ಇಂದಿನಿಂದ ದೇಶಾದ್ಯಂತ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಇಂದಿನಿಂದ ಪ್ರಾರಂಭವಾಗುತ್ತಿದೆ.

error: Content is protected !!