ಮಾ.10, 11ರಂದು‌‌ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಲೋಕಾರ್ಪಣೆ: ಗುರುಜಯಂತಿ, ಶ್ರೀ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಲೋಕಾರ್ಪಣೆ, ಬ್ರಹ್ಮಶ್ರೀ ನಾರಾಯಣ ಗುರುಗಳ 166ನೇ ವರ್ಷದ ಗುರುಜಯಂತಿ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ಮಾ.10 ಮತ್ತು 11ರಂದು ಬಳಂಜ ಸಂಘದ ವಠಾರದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ- ನಾಲ್ಕೂರು- ತೆಂಕಕಾರಂದೂರು ಇದರ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು‌ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಹೇಳಿದರು.

ಅವರು ಮಂಗಳವಾರ ಪ್ರವಾಸಿ ಬಂಗಲೆಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ದಿವ್ಯ ಘೋಷಣೆಯನ್ನು ಇಡೀ ಜಗತ್ತಿಗೆ ಸಾರಿದ ಹಿಂದುಳಿದ ಸಮಾಜದವರನ್ನು ಮುಖ್ಯವಾಹಿನಿಗೆ ತಂದು ಸಂಘಟನೆಯಿಂದ ಬಲಯುತರಾಗಿ, ವಿದ್ಯೆಯಿಂದ ಸ್ವತಂತ್ರರಾಗಿ ಎಂಬ ಸಂದೇಶದೊಂದಿಗೆ ಮನುಕುಲದ ಪ್ರಕಾಶಮಾನವಾಗಿ ಬಾಳಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಗ್ರಾಮೀಣ ಪ್ರದೇಶದಲ್ಲಿ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಲು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ 11/09/1979ರಲ್ಲಿ ಸಂಘಟನೆ ರೂಪುಗೊಂಡಿದೆ.

ಸಮಿತಿಯ ಮೂಲಕ 14/11/2018ರಂದು ಭೂಮಿ ಪೂಜೆಯನ್ನು ನೆರವೇರಿಸಲಾಗಿದ್ದು, ಅಂದಾಜು ರೂ. 1 ಕೋಟಿ ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗಿದೆ. ಮಾ. 10 ಹಾಗೂ 11ರಂದು ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗೊಳೊಂದಿಗೆ ವಿಜೃಂಭಣೆಯಿಂದ ಭವನ ಲೋಕಾರ್ಪಣೆಗೊಳ್ಳಲಿದೆ. ಮಾ. 11ರಂದು ಬೆಳಗ್ಗೆ 9.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಉದ್ಘಾಟನಾ ಸಮಾರಂಭ ನಡೆಯಲಿದ್ದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀ ಶ್ರೀನಿವಾಸ ಪೂಜಾರಿ ಸಮುದಾಯ ಭವನ ಲೋಕಾರ್ಪಣೆಗೊಳಿಸಲಿದ್ದಾರೆ. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ (ರಿ.) ಬಳಂಜ ಇದರ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಭಾಗಿ-ಮುಂಡಪ್ಪ ಪೂಜಾರಿ ಸಭಾವೇದಿಕೆ ಉದ್ಘಾಟನೆಗೊಳಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ, ಮಾಜಿ ರಾಜ್ಯ ಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟನೆಗೊಳಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಕಛೇರಿ ಉದ್ಘಾಟಿಸಲಿದ್ದಾರೆ, ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ನಾಮಫಲಕ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಡಾ| ರಾಜಶೇಖರ್ ಕೋಟ್ಯಾನ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಎಂ. ತುಂಗಪ್ಪ ಬಂಗೇರ, ಪನಾಮ ಕಾರ್ಪೊರೇನ್ ಮಂಗಳೂರು ಇದರ ಚೇರ್‌ಮ್ಯಾನ್ ಮತ್ತು ಸಿ.ಇ.ಒ ವಿವೇಕ್ ರಾಜ್ ಪೂಜಾರಿ, ಉದ್ಯಮಿಗಳು ಮುಂಬಯಿ, ಸುರೇಶ್ ಪೂಜಾರಿ ಅರ್ವ, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರು ಹೇಮಂತ್, ಜಿ ಪಂ ಸದಸ್ಯ ಧರಣೇಂದ್ರಕುಮಾರ್, ಯುವ ಬಿಲ್ಲವವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷ ರಂಜಿತ್ ಹೆಚ್.ಡಿ ಸುಧಾಮ, ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷೆ ರಾಜಶ್ರೀರಮಣ್, ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಳಿಗ್ಗೆ ಗಂಟೆ 6ಕ್ಕೆ ಪ್ರಾರ್ಥನೆ, ಗಣಹೋಮ, ಸತ್ಯನಾರಾಯಣ ಪೂಜೆ, ಶ್ರೀ ಗುರುಪೂಜೆ, 9.30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಲೋಕಾರ್ಪಣೆ, ಸಭಾ ಕಾರ್ಯಕ್ರಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5.30ರಿಂದ ಗೀತ-ಸಾಹಿತ್ಯ-ಸಂಭ್ರಮ, ಸಂಜೆ ಗಂಟೆ 6.30ರಿಂದ ಸಮಾರೋಪ ಸಮಾರಂಭ, ಅನ್ನಸಂತರ್ಪಣೆ, ರಾತ್ರಿ ಗಂಟೆ 9ರಿಂದ ನಮಸ್ಕಾರ ಮಾಸ್ಟ್ರೆ ನಾಟಕ ಪ್ರದರ್ಶನಗೊಳ್ಳಲಿದೆ. ಮಾ. 10ರಂದು ಬುಧವಾರ ಸಮಯ ಬೆಳಿಗ್ಗೆ ಗಂಟೆ 9.30ಕ್ಕೆ ಬಳಂಜ- ನಾಲ್ಕೂರು-ತೆಂಕಕಾರಂದೂರು ಗ್ರಾಮಸ್ಥರಿಂದ ಭವ್ಯ ಹೊರಕಾಣಿಕೆ ಮೆರವಣಿಗೆ ಹಾಗೂ ಸಮರ್ಪಣೆಗೆ ಬೆಳ್ತಂಗಡಿ ಸುವರ್ಣ ಆರ್ಕೆಡ್ ಸಂತೆಕಟ್ಟೆ ಇದರ ಮಾಲಕ ವೈ ನಾಣ್ಯಪ್ಪ ಪೂಜಾರಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ ಗಂಟೆ 11ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ವಕೀಲರು ಮತ್ತು ನೋಟರಿ, ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ, ಕುದ್ರೋಳಿ, ಮಂಗಳೂರು ಇದರ ಕೋಶಾಧಿಕಾರಿ ಪದ್ಮರಾಜ್ ಆರ್. ಉಗ್ರಾಣ ಮಹೂರ್ತ ನೆರವೇರಿಸಲಿದ್ದಾರೆ. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ (ರಿ.) ಬಳಂಜ ಗೌರವ ಮಾರ್ಗದರ್ಶಕರಾದ ಕೆ. ವಸಂತ ಸಾಲಿಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಪೂರ್ವಾಧ್ಯಕ್ಷ ಗಂಗಾಧರ ಮಿತ್ತಮಾರು, ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ, ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿಕಟಪೂವಾಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಪೂವಾಧ್ಯಕ್ಷರಾದ ಭಗೀರಥ ಜಿ, ಯೋಗೀಶ್ ಕುಮಾರ್ ಕೆ.ಎಸ್, ಪ್ರಗತಿಪರ ಕೃಷಿಕರು, ಗುರುದೇವ, ಕೊಡಂಗೆ ಸಂಜೀವ ಪೂಜಾರಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಯಶವಂತ ಎಸ್., ಉಪಸ್ಥಿತರಿರಲಿದ್ದಾರೆ.

ಸಂಜೆ 6ರಿಂದ ಶ್ರೀ ರಘುನಾಥ ಶಾಂತಿಯವರ ನೇತೃತ್ವದಲ್ಲಿ ವೈದಿಕ ವಿಧಿವಿಧಾನಗಳು ನಡೆಯಲಿದೆ. ಸಮಾರೋಪ ಸಮಾರಂಭ ಸಂಜೆ 6.30ಕ್ಕೆ ನಡೆಯಲಿದ್ದು ಮಾಜಿ ಶಾಸಕ, ಸಣ್ಣ ಕೈಗಾರಿಕಾ ನಿಗಮ, ಕರ್ನಾಟಕ ಸರಕಾರ ಇದರ ಮಾಜಿ ಅಧ್ಯಕ್ಷ ಕೆ. ವಸಂತ ಬಂಗೇರ ಅಧ್ಯಕ್ಷತೆ ವಹಿಸಲಿದ್ದಾರೆ. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ ಇದರ ಗೌರವಾಧ್ಯಕ್ಷ ಹೆಚ್. ದರ್ಣಪ್ಪ ಪೂಜಾರಿ ಗೌರವ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಇದರ ಉಪಾಧ್ಯಕ್ಷ, ನಿವೃತ್ತ ಎಸ್.ಪಿ. ಪಿತಾಂಬರ ಹೇರಾಜೆ, ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಪ್ರಮುಖ್ ಕೇಶವ ಬಂಗೇರ, ವಿಶೇಷ ಕರ್ತವ್ಯ ನಿರ್ವಹಣಾಧಿಕಾರಿ ಜಗನ್ನಾಥ ಬಂಗೇರ, ಬಂಟ್ವಾಳ ಸಾರಿಗೆ ಇಲಾಖೆ ಅಧೀಕ್ಷಕ ಚರಣ್ ಕುಮಾರ್, ಉದ್ಯಮಿ ಶ್ರೀ ರವಿಪೂಜಾರಿ ಚಿಲಿಂಬಿ, ಮಂಗಳೂರು ಬಿರುವೆರ್ ಕುಡ್ಲ ಮಂಗಳೂರು ಇದರ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್‌ಬಾಗ್, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಡಾ. ರಾಜರಾಮ್ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಮಾ.14ರಂದು ರಾತ್ರಿ 7ರಿಂದ ಶ್ರೀ ಬೊಳ್ಳಜ್ಜ ದೈವದ ಅಗೇಲು ಸೇವೆ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಸಂಚಾಲಕ ಸಂತೋಷ್ ಪಿ. ಕೋಟ್ಯಾನ್, ಪ್ರಚಾರ ಮತ್ತು ಮಾಧ್ಯಮ ಸಮಿತಿ ಸಂಚಾಲಕ ಮನೋಹರ ಬಳಂಜ, ಪ್ರಧಾನ ಕಾರ್ಯದರ್ಶಿ ಯೋಗೀಶ್ ಯೈಂಕುರಿ, ಸಾಂಸ್ಕೃತಿಕ ಮತ್ತು ಕಾರ್ಯಕ್ರಮ ನಿರ್ವಹಣಾ ಸಮಿತಿ ಸಂಚಾಲಕ ಚಂದ್ರಹಾಸ ಬಳಂಜ, ಉಪಸ್ಥಿತರಿದ್ದರು.

error: Content is protected !!