ಬಡ ವಿದ್ಯಾರ್ಥಿಗಳ ನೆರವಿಗಾಗಿ ಬಿರ್ವ ಚಾರಿಟೇಬಲ್ ಟ್ರಸ್ಟ್‌: ಮಾ 7 ನಾರಾವಿಯಲ್ಲಿ ಉದ್ಘಾಟನೆ

ಬೆಳ್ತಂಗಡಿ: ಸಮಾಜದಲ್ಲಿ ಅಶಕ್ತ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡುವ ನಿಟ್ಟಿನಲ್ಲಿ ಬಿರ್ವ ಚಾರಿಟೇಬಲ್ ಟ್ರಸ್ಟ್ ಇದೇ ಬರುವ ಮಾ 7 ಆದಿತ್ಯವಾರ ಉದ್ಘಾಟನೆಗೊಳ್ಳಲಿದೆ ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್ ತಿಳಿಸಿದರು.ಅವರು ಬೆಳ್ತಂಗಡಿ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಡೊಂಕಬೆಟ್ಟು ಶ್ರೀಮತಿ ವೀರಮ್ಮ ಸಂಜೀವ ಸಾಲಿಯಾನ್ ಅವರ ಪರಿಕಲ್ಪನೆಯಂತೆ ತಾಲೂಕು ಹಾಗೂ ಇನ್ನಿತರ ಕೆಲವು ಪ್ರದೇಶಗಳ ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎನ್ನುವ ಚಿಂತನೆಯನ್ನು ಇಟ್ಟುಕೊಂಡು ಈ ಟ್ರಸ್ಟ್ ಆರಂಭವಾಗಲಿದೆ ಈಗಾಗಲೇ 44 ವಿದ್ಯಾರ್ಥಿಗಳ ದತ್ತು ಸ್ವೀಕಾರ ಮಾಡಿ ಅವರ ವಿದ್ಯಾಭ್ಯಾಸಕ್ಕೆ ಬೇಕಾದಂತಹ ವ್ಯವಸ್ಥೆಗಳನ್ನು ಮಾಡಿಕೊಂಡು ಬರುತ್ತಿದೆ ಅದಲ್ಲದೇ ಸರಿಯಾದ ರೀತಿಯಲ್ಲಿ ವಿದ್ಯಾರ್ಥಿಗಳ ಅರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದಲ್ಲದೆ ಅವರಿಗೆ ಕೆಲವೊಂದು ಕಾಲೇಜ್ ನ ಬಗ್ಗೆಯೂ ಮಾಹಿತಿ ನೀಡಲಾಗುವುದು ಟ್ರಸ್ಟ್ ನ ಉದ್ಘಾಟನಾ ಕಾರ್ಯಕ್ರಮವು ನಾರಾವಿ ಸಮೀಪದ ಡೊಂಕಬೆಟ್ಟು ಸನ್ನಿಧಿ‌ ಪ್ಯಾಲೇಸ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು ಬಲ್ಯೊಟ್ಟು ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ಆಶೀವರ್ಚನದೊಂದಿಗೆ ಟ್ರಸ್ಟ್ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮಾಡಲಿದ್ದಾರೆ.ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ.

ಸಾಧಕರಿಗೆ ಸನ್ಮಾನವನ್ನು ಮಾಜಿ ಶಾಸಕ ವಸಂತ ಬಂಗೇರ ಮಾಡಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ವೀರಮ್ಮ ಸಂಜೀವ ಸಾಲ್ಯಾನ್ ವಹಿಸಿಕೊಳ್ಳಲಿದ್ದಾರೆ. ಅಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಯೋಗೀಶ್ ಕೈರೋಡಿ ಪ್ರಧಾನ ಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಂತೋಷ್ ಉಪ್ಪಾರ್, ಪ್ರವೀಣ್ ಕೊಟ್ಯಾನ್, ಕೋಶಾಧಿಕಾರಿ,ಪ್ರಕಾಶ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ, ಕಾನೂನು ಸಲಹೆಗಾರರಾದ ಮನೋಹರ್ ಇಳಂತಿಲ ಸತೀಶ್ ಪಿ ಎನ್, ಹಾಗೂ ರಕ್ಷಿತ್ ಬಂಗೇರ ಅಂಡಿಂಜೆ, ಉಪಸ್ಥಿತರಿದ್ದರು.

error: Content is protected !!